ಮುಂಬೈ : ಗುಜರಾತ್ ಟೈಟಾನ್ಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್‌ಗಳನ್ನು ಪೂರ್ಣಗೊಳಿಸುವಲ್ಲಿ ಮುಂಬೈ ಇಂಡಿಯನ್ಸ್ ತಂಡ ವಿಫಲವಾಗಿತ್ತು. ಈ ಹಿನ್ನೆಲೆ ಹಾರ್ದಿಕ್ ಪಾಂಡ್ಯಗೆ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಹಾಗೂ ಸ್ಲೋ ಓವರ್ ರೇಟ್ ತಪ್ಪುನ್ನು ಮುಂದಿನ ಪಂದ್ಯಗಳಲ್ಲಿ ಪುನರಾವರ್ತಿಸಿದರೆ ಡಿಮೆರಿಟ್ ಪಾಯಿಂಟ್ ನೀಡುವ ಎಚ್ಚರಿಕೆ ನೀಡಲಾಗಿದೆ. ಜೊತೆಗೆ ಹಾರ್ದಿಕ್ ಪಾಂಡ್ಯ 24 ಲಕ್ಷ ರೂ. ದಂಡ ಕಟ್ಟಬೇಕಾಗುತ್ತದೆ.
ಐಪಿಎಲ್ ನಿಯಮದ ಪ್ರಕಾರ, ಪ್ರತಿ ತಂಡಗಳು 20 ಓವರ್‌ಗಳನ್ನು 1 ಗಂಟೆ 30 ನಿಮಿಷಗಳಲ್ಲಿ ಪೂರ್ಣಗೊಳಿಸಬೇಕು. ಒಂದು ವೇಳೆ ಇದಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಂಡರೆ ಪಂದ್ಯದ ವೇಳೆ ಬೌಂಡರಿ ಲೈನ್‌ನಿಂದ ಒರ್ವ ಫೀಲ್ಡರ್‌ನನ್ನು ಕಡಿತಗೊಳಿಸಲಾಗುತ್ತದೆ. ಹಾಗೆಯೇ ಈ ತಪ್ಪನ್ನು ಮಾಡಿದ ತಂಡದ ನಾಯಕನಿಗೆ 12 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.