ಮುಂಬೈ: ವಾಣಿಜ್ಯ ರಾಜಧಾನಿ ಎಂದೇ ಕರೆಯಲಾಗುವ ಮುಂಬೈ ಮಹಾನಗರದಲ್ಲಿ ವಾಯು ಮಾಲಿನ್ಯ ಹೆಚ್ಚುತ್ತಿದೆ. ವಾಯು ಮಾಲಿನ್ಯ ನಿಯಂತ್ರಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಈ ಮಾಲಿನ್ಯಕ್ಕೆ ರಸ್ತೆ ಧೂಳು ಕಾರಣ ಎನ್ನಲಾಗಿದೆ. ಪ್ರಕಟಣೆಯಲ್ಲಿ, ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ತನ್ನ ಘನತ್ಯಾಜ್ಯ ಇಲಾಖೆ ಅಧಿಕಾರಿಗಳಿಗೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ಸೂಚಿಸಿದೆ. ಇದು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಲ್ಲಿ ಹದಗೆಡುತ್ತಿರುವ ಗಾಳಿಯ ಗುಣಮಟ್ಟದ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಹೊಸ ಕ್ರಮಗಳಲ್ಲಿ ಅಡುಗೆಗೆ ಇಂಧನವಾಗಿ ಮರ ಅಥವಾ ಅಂತಹುದೇ ವಸ್ತುಗಳನ್ನು ಬಳಸುವುದನ್ನು ನಿಷೇಧಿಸುವುದು ಮತ್ತು ನಿರ್ಮಾಣ ಸ್ಥಳಗಳಲ್ಲಿ ದೀಪಗಳನ್ನು ಬೆಳಗಿಸುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
” ನಿಷೇಧಿತ ಕ್ರಮಗಳನ್ನು ತೆಗೆದುಕೊಳ್ಳಲು ಸಂಬಂಧಿತ ಇಲಾಖೆಗೆ ವಿಜಿಲೆನ್ಸ್ ತಂಡಗಳನ್ನು ನೇಮಿಸಲು ಮತ್ತು ಸ್ವಚ್ಛತಾ ಮಾರ್ಷಲ್ಗಳನ್ನು ನೇಮಕ ಮಾಡಲು ಸೂಚಿಸಲಾಗಿದ್ದು ಈ ಮೂಲಕ ಘನತ್ಯಾಜ್ಯ ನಿರ್ವಹಣಾ ಇಲಾಖೆಯು ರಸ್ತೆಗಳ ಉದ್ದಕ್ಕೂ ನಿರ್ಮಾಣದಿಂದ ಉಂಟಾಗುವ ಧೂಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುತ್ತದೆ ಎಂದು ಖಚಿತಪಡಿಸಿಕೊಳ್ಳಲಿದೆ” ಎಂದು ಪ್ರಕಟಣೆ ತಿಳಿಸಿದೆ.