ಬೆಂಗಳೂರು : ಅರ್ಹತೆ ಇಲ್ಲದೇ ಬಿಪಿಎಲ್ ಕಾರ್ಡ್ ಪಡೆದಿರುವವರ ಮೇಲೆ ದಂಡ ಪ್ರಯೋಗಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಅರ್ಹತೆ ಇಲ್ಲದೇ ಇರೋರು ಬಿಪಿಎಲ್ ಕಾರ್ಡ್ ವಾಪಸ್ ಮಾಡಿ ಎಂದು ಸಚಿವ ಮುನಿಯಪ್ಪ ಮಾಹಿತಿ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅರ್ಹತೆ ಇಲ್ಲದೇ ಇರೋರು ಸಾಕಷ್ಟು ಜನ ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಇವರಿಗೆ ಕಾರ್ಡ್ ವಾಪಸ್ ಕೊಡಲು ಮನವಿ ಮಾಡುತ್ತೇವೆ. ಈ ಸಂಬಂಧ ಇನ್ನೊಂದು ವಾರದಲ್ಲಿ ಜಾಹೀರಾತು ಹೊರಡಿಸುತ್ತೇವೆ. ಮನವಿ ಮಾಡಿದ ಮೇಲೂ ಕಾರ್ಡ್ ವಾಪಸ್ ಕೊಡದೇ ಹೋದರೆ ಬಳಿಕ ದಂಡ ಪ್ರಯೋಗ ಮಾಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಕಾನೂನಿನಲ್ಲಿ ಅವಕಾಶ ಇರುವ ದಂಡ ಪ್ರಯೋಗ ಮಾಡೋದಾಗಿ ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಡ್ ಪರಿಶೀಲನೆ ಪ್ರಾರಂಭ ಮಾಡಲಾಗುತ್ತದೆ. ಮನವಿ ಬಳಿಕವೂ ಕಾರ್ಡ್ ವಾಪಸ್ ಕೊಡದೇ ಹೋದರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡಿದ ಬಳಿಕ ಸಿಕ್ಕಿ ಹಾಕಿಕೊಂಡರೆ ದಂಡ ಪ್ರಯೋಗ ಮಾಡಲಾಗುತ್ತದೆ. ಬಿಪಿಎಲ್ ಕಾರ್ಡ್ ಮಾನದಂಡಗಳನ್ನು ಪರಿಷ್ಕರಣೆ ಮಾಡೋ ಬಗ್ಗೆ ವಿಚಾರ ಮಾಡಿ, ಕ್ಯಾಬಿನೆಟ್‌ನಲ್ಲಿ ಈ ಬಗ್ಗೆ ನಿರ್ಧಾರ ಮಾಡೋದಾಗಿ ತಿಳಿಸಿದ್ದಾರೆ.