ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎದೆನೋವು ಕಾಣಿಸಿಕೊಂಡ ನಂತರ ಚೆನ್ನೈ ಆಸ್ಪತ್ರೆಗೆ ದಾಖಲಿಸಲಾಗಿದೆ.
ರೆಹಮಾನ್ (58) ಅವರನ್ನು ಬೆಳಗ್ಗೆ 7:30 ಕ್ಕೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಇಸಿಜಿ ಮತ್ತು ಎಕೋಕಾರ್ಡಿಯೋಗ್ರಾಮ್ ಸೇರಿದಂತೆ ಕೆಲವು ಪರೀಕ್ಷೆಗಳಿಗೆ ಒಳಪಡಿಸಲಾಯಿತು. ಅವರು ಆಂಜಿಯೋಗ್ರಾಮ್ ಪರೀಕ್ಷೆಗೆ ಒಳಗಾಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಕಳೆದ ತಿಂಗಳು, ಎಆರ್ ರೆಹಮಾನ್ ಚೆನ್ನೈನಲ್ಲಿ ನಡೆದ ತಮ್ಮ ಸಂಗೀತ ಕಚೇರಿಯಲ್ಲಿ ಎಡ್ ಶೀರನ್ ಅವರೊಂದಿಗೆ ಪ್ರದರ್ಶನ ನೀಡಿದ್ದರು. ಒಂದು ವಾರದ ನಂತರ, ಅವರು ‘ಚಾವಾ’ ಸಿನಿಮಾದ ಸಂಗೀತ ಬಿಡುಗಡೆ ಸಮಾರಂಭದಲ್ಲಿಯೂ ಕಾಣಿಸಿಕೊಂಡಿದ್ದರು.