ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸಮರ್ಥ್ ಶಾಮನೂರು ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದಕ್ಕೆ ತೀವ್ರ ಅಸಮಾಧಾನಗೊಂದು ಸ್ವಪಕ್ಷದ ವಿರುದ್ಧವೇ ಸಿದಿದೆದ್ದಿದ್ದ ಮುಸ್ಲಿಂ ಮುಖಂಡ ಸಾದಿಕ್ ಪೈಲ್ವಾನ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸಾದಿ ಪೈಲಾನ್ ಮನವೊಲಿಕೆ ಮಾಡುವಲ್ಲಿ ಯಶ್ವಿಯಾಗಿದ್ದು, ಚುನಾವಣಾ ಕಣದಿಂದಲೇ ಸಾದಿಕ್ ಪೈಲ್ವಾನ್ ನಿವೃತ್ತಿ ಘೋಷಿಸಿದ್ದಾರೆ.
ಈ ಮೂಲಕ ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆಗೆ ಮುಸ್ಲಿಂ ಮುಖಂಡರಿಂದ ಎದುರಾಗಿದ್ದ ತೊಡಕು ನಿವಾರಣೆಯಾದಂತಾಗಿದ್ದು, ಸಮಸ್ಯೆ ಬಗೆಹರಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಮತೆ ನಡೆಸಿದ ಬಳಿಕ ಸಾದಿಕ್ ಪೈಲ್ವಾನ್ ಜೊತೆ ನಡೆಸಿದ ಸಂಧಾನ ಸಭೆ ಸಫಲವಾಗಿದ್ದು, ಚುನಾವಣಾ ಕಣದಿಂದಲೇ ಸಾದಿಕ್ ಹಿಂದೆ ಸರಿದಿದ್ದಾರೆ. ಈಗಾಗಲೇ ನಾಮಪತ್ರ ಹಿಂಪಡೆಯುವ ಅವಕಾಶ್ ಮುಗಿದಿದ್ದರಿಂದ ಚುನಾವಣಾ ಕಣದಿಂದಲೇ ನಿವೃತ್ತಿ ಘೋಷಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾದಿಕ್ ಪೈಲ್ವಾನ್, ಬಂಡಾಯ ಸ್ಪರ್ಧೆಯಿಂದ ನಾನು ನಿವೃತ್ತಿಯಾಗಿದ್ದೇನೆ. ಖಂಡಿತವಾಗಿಯೂ ಅಲ್ಪಸಂಖ್ಯಾತರು, ಅಹಿಂದ ವರ್ಗದ ಜನ ಭುಜಕ್ಕೆ ಭುಜ ಕೊಟ್ಟು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಪುತ್ರನನ್ನು ಗೆಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.
ನಾನು ಕಾಂಗ್ರೆಸ್ ನವನೇ. ನನ್ನ ಮನೆಗೆ ಬಂದಿದ್ದೇನೆ. ಮನೆಯಲ್ಲಿ ಅಣ್ಣ-ತಮ್ಮಂದಿರ ಮಧ್ಯೆ ಜಗಳವಾದರೆ ಹಿರಿಯರು ಬಗೆಹರಿಸುತ್ತಾರೆ. ಹಾಗೇ ಹಿರಿಯ ನಾಯಕರು ಸಮಸ್ಯೆ ಬಗೆಹರಿಸಿದ್ದಾರೆ ಎಂದು ತಿಳಿಸಿದರು.
































