ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲಿನ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮುತ್ತಪ್ಪ ರೈ 2ನೇ ಪತ್ನಿ ಅನುರಾಧ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಪ್ರಕರಣದಲ್ಲಿ A2 ಆರೋಪಿಯಾಗಿರುವ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧ ಏಪ್ರಿಲ್ 14 ರಂದೇ ವಿದೇಶಕ್ಕೆ ತೆರಳಿದ್ದಾರೆಂದು ತಿಳಿದು ಬಂದಿದೆ.
ಅನುರಾಧ ಬಳಸುತ್ತಿದ್ದ ಸಿಮ್ ಅಡ್ರೆಸ್ ಹುಡುಕಿ ನೋಟೀಸ್ ನೀಡಲು ಪೊಲೀಸರು ತೆರಳಿದ್ದರು. ಆದರೆ ಸಿಮ್ ಅಡ್ರೆಸ್ ಇರುವ ಮನೆಯನ್ನು ಅನುರಾಧ ಮಾರಾಟ ಮಾಡಿದ್ದಾರೆ ಅಮೇರಿಕ ಮೂಲದ ವ್ಯಕ್ತಿಗೆ ಮನೆ ಮಾರಾಟ ಮಾಡಿದ್ದಾರೆ. ಹೀಗಾಗಿ ಮೊದಲೇ ಪ್ಲಾನ್ ಮಾಡಿ ಅನುರಾಧ ಮನೆ ಮಾರಾಟ ಮಾಡಿದ್ರಾ ಎಂದು ಅನುಮಾನ ಮೂಡಿದೆ.
ಪ್ರಕರಣದ ಎಫ್‌ಐಆರ್ ಸಂಬಂಧ ಜರ್ಮನಿಯಲ್ಲಿರುವ ಅನುರಾಧ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಕೀಲರ ಮೂಲಕ ಹೈಕೋರ್ಟ್ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ಪ್ರಕರಣದ ಎ1 ಆರೋಪಿ ರಾಕೇಶ್ ಮಲ್ಲಿ ಮುಂಬೈನಲ್ಲಿರುವ ಶಂಕೆ ವ್ಯಕ್ತವಾಗಿದೆ. ಎ3 ಆರೋಪಿ ನಿತೀಶ್ ಶೆಟ್ಟಿ, ಎ4 ಆರೋಪಿ ವೈದ್ಯನಾಥನ್ ನಾಳೆ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.