ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ.
ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇಂದು ಈ ಹುದ್ದೆಗೆ ನಾಮಪತ್ರ ಸಲ್ಲಿಸಿದ ಏಕೈಕ ವ್ಯಕ್ತಿ ಅವರಾದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ನೈನಾರ್ ನಾಗೇಂದ್ರನ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಬಿಜೆಪಿಯ ಇತರ ನಾಯಕರು ಅದನ್ನು ಅನುಮೋದಿಸಿದರು. ನೈನಾರ್ ನಾಗೇಂದ್ರನ್ ಅವರನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಅಧಿಕೃತ ಘೋಷಣೆಯನ್ನು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಿಂದ ಮಾಡಲಾಗುವುದು.
ಅಣ್ಣಾಮಲೈ ತಾವು ಬಿಜೆಪಿ ರಾಜ್ಯಾಧ್ಯಕ್ಷನ ರೇಸ್ನಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದರಿಂದ ಈ ಹುದ್ದೆಗೆ ವನತಿ ಶ್ರೀನಿವಾಸನ್ ಮತ್ತು ತಮಿಳಿಸೈ ಸೌಂದರರಾಜನ್ ಅವರಂತಹ ಹೆಸರುಗಳ ಬಗ್ಗೆ ಊಹಾಪೋಹಗಳಿದ್ದರೂ ಅಂತಿಮವಾಗಿ ನಾಗೇಂದ್ರನ್ ಆಯ್ಕೆಯಾಗಿದ್ದಾರೆ.