ಬೆಂಗಳೂರು : ದರ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು, ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಈ ಹಿಂದೆ ಪ್ರತಿ ಲೀಟರ್ನಲ್ಲಿ ಹೆಚ್ಚುವರಿಯಾಗಿ 50 ಎಂಎಲ್ ನೀಡಿ 2 ರೂಪಾಯಿ ಏರಿಕೆ ಮಾಡಿತ್ತು. ಇದೀಗ, ಕರ್ನಾಟಕ ಹಾಲು ಒಕ್ಕೂಟ ನಂದಿನಿ ಹಾಲಿನ ದರ ಮತ್ತೆ ಏರಿಕೆ ಮಾಡುವ ಸಾಧ್ಯತೆ ಇದೆ.
ಇದಕ್ಕೆ ಪುಷ್ಠಿ ನೀಡುವಂತೆ ರೈತರು ಹಾಗೂ ಹಾಲು ಒಕ್ಕೂಟಗಳು ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆ ಮಾಡುವಂತೆ ಕೆಎಂಎಫ್ಗೆ ಮನವಿ ಮಾಡಿವೆ. ಈ ಬಗ್ಗೆ ಚಳಿಗಾಲದ ಅಧಿವೇಶನದ ನಂತರ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಭೀಮಾ ನಾಯ್ಕ್ ಅವರು ಹಾಲಿನ ದರ ಏರಿಕೆಯ ಯಾವುದೇ ಪ್ರಸ್ತಾವನೆ ಇಲ್ಲ ಎಂದು ತಿಳಿಸಿದ್ದರು. ಆದರೆ ಇದೀಗ ಭೀಮಾ ನಾಯ್ಕ್ ಅವರ ಈ ಹೇಳಿಕೆಯಿಂದ ಹಲವಾರು ಪ್ರಶ್ನೆಗಳು ಮೂಡಿವೆ.