ಬೆಂಗಳೂರು : ಇದೀಗ ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡುವ ಮೂಲಕ ರಾಜ್ಯದ ಜನತೆಗೆ ದೊಡ್ಡ ಶಾಕ್ ಕೊಟ್ಟಿದೆ.ನಂದಿನ ಹಾಲಿನ ದರ 4 ರೂ. ಹೆಚ್ಚಳ ಮಾಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.
ನಾಳೆಯಿಂದಲೇ (ಮಾ.28) ಪರಿಷ್ಕೃತ ದರ ಜಾರಿಯಾಗಲಿದೆ.ನಂದಿನ ಹಾಲಿನ ದರ 4 ರೂ. ಹೆಚ್ಚಳ ಮಾಡಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ಹಾಲಿನ ದರ ಹೆಚ್ಚಳಕ್ಕೆ ಒಕ್ಕೂಟಗಳು ಪ್ರಸ್ತಾಪ ಇಟ್ಟಿದ್ದವು. ಆದರೆ ಸೋಮವಾರ ನಡೆದ ಸಭೆಯಲ್ಲಿ ಸಿಎಂ ಈ ದರಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಹಾಲಿನ ದರ ಹೆಚ್ಚಳ ಹಣ ಕೇವಲ ರೈತರಿಗಷ್ಟೇ ಇರಲಿ ಎಂದಿದ್ದರು. ಆದರೆ ಸಭೆಯ ಬಳಿಕ 5 ರೂ.ಯಾದರೂ ಹೆಚ್ಚಳ ಮಾಡಿ, ಅದರಲ್ಲಿ 3 ರೂ. ರೈತರಿಗೆ, 2 ರೂ. ಒಕ್ಕೂಟಗಳಿಗೆ ಇರಲಿ ಎಂದು ಪ್ರಸ್ತಾಪಿಸಿದ್ದರು. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 4 ರೂ. ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದೆ.
ಹಾಲಿನ ದರ ಇಂತಿದೆ:
ನೀಲಿ ಪ್ಯಾಕೆಟ್ ಹಾಲು – 44 ರೂ ನಿಂದ 48 ರೂ
ಆರೆಂಜ್ ಪ್ಯಾಕೆಟ್ ಹಾಲು – 54 ರೂ. ನಿಂದ 58 ರೂ.
ಸಮೃದ್ಧಿ ಹಾಲಿನ ಪ್ಯಾಕೆಟ್ 56 ರೂ. ನಿಂದ 60 ರೂ.
ಗ್ರೀನ್ ಸ್ಪೇಷಲ್ 54 ರೂ. ನಿಂದ 58 ರೂ.
ನಾರ್ಮಲ್ ಗ್ರೀನ್ 52 ರೂ. ನಿಂದ 56 ರೂ.