ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 2025-26ನೇ ಸಾಲಿಗೆ 9 ಮತ್ತು 11 ತರಗತಿ ತರಗತಿಯ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಆಡಳಿತಾತ್ಮಕ ಕಾರಣಗಳಿಂದ ಇದೇ ನ.26 ರವರೆಗೆ ವಿಸ್ತರಿಸಲಾಗಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು 9ನೇ ತರಗತಿಗೆ https://cbseitms.nic.in/2024/nvsix/registrationclasssIX/ registrationclasssIX/ 11ನೇ ತರಗತಿಗೆ https://cbseitms.nic.in/2024/nvsix11/registrationclasssXI//registrationclasssXI ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.