ಅಮರಾವತಿ: ಆಂಧ್ರಪ್ರದೇಶದಲ್ಲಿ ಎನ್ಡಿಎ ಮೈತ್ರಿಕೂಟಕ್ಕೆ ರಾಜ್ಯದ ಜನತೆ ನೀಡಿದ ಅಭೂತಪೂರ್ವ ಬೆಂಬಲಕ್ಕಾಗಿ ಜನತೆಗೆ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಧನ್ಯವಾದ ಹೇಳಿದ್ದಾರೆ.
ಲೋಕಸಭೆ ಮತ್ತು ವಿಧಾನ ಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ಸೋಷಿಯಲ್ ಮೀಡಿಯಾ ಪೋಸ್ಟ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಭವಿಷ್ಯಕ್ಕಾಗಿ ತಮ್ಮ ಬದ್ಧತೆಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಹಿರಿಯ ನಾಯಕರಾದ ಅಮಿತ್ ಶಾ ಮತ್ತು ಜೆಪಿ ನಡ್ಡಾ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಇಂದು ಎನ್ ಡಿಎ ಮೈತ್ರಿಕೂಟಗಳ ಸಭೆ ಸಾಯಂಕಾಲ ದೆಹಲಿಯಲ್ಲಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದು ಮುಂದಿನ ಸರ್ಕಾರ ರಚನೆಯ ಬಗ್ಗೆ ಗಹನ ಚರ್ಚೆ ನಡೆಯಲಿದೆ.
ಅದರಲ್ಲಿ ಭಾಗವಹಿಸಲು ದೆಹಲಿಗೆ ಹೊರಟ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಚಂದ್ರಬಾಬು ನಾಯ್ಡು, ಇಂದು, ನಾನು ದೆಹಲಿಗೆ ಹೋಗುತ್ತಿದ್ದೇನೆ, ನಾನು ಎನ್ಡಿಎಗೆ ಬೆಂಬಲ ನೀಡುತ್ತೇನೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.