ಚಿತ್ರದುರ್ಗ: ನ್ಯಾಷಿನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ಮೇ.4 ರಂದು ನೀಟ್ ಪರೀಕ್ಷೆ ನಡೆಯಲಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 3013 ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ಮೇ.4 ರಂದು ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆವರೆಗೆ ನೀಟ್ ಪರೀಕ್ಷೆ ಜರುಗಲಿದೆ.
ಚಿತ್ರದುರ್ಗ ನಗರದ ಸರ್ಕಾರಿ ಬಾಲಕರ ಹಾಗೂ ಬಾಲಕಿಯರ ಪದವಿ ಪೂರ್ವ ಕಾಲೇಜು, ಸರ್ಕಾರಿ ಕಲಾ ಹಾಗೂ ವಿಜ್ಞಾನ ಕಾಲೇಜು, ಚಳ್ಳಕೆರೆ ನಗರದ ಹೆಚ್.ಪಿ.ಪಿ.ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ನೀಟ್ ಪರೀಕ್ಷೆ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರಿಗೆ ಸೂಕ್ತ ಮಾಹಿತಿ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ ಶುಚಿತ್ವ ಕಾರ್ಯ ಕೈಗೊಳ್ಳುವಂತೆ ಸಂಬAಧಿಸಿದ ನಗರಸಭೆ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ. ಪರೀಕ್ಷಾ ಅವಧಿಯಲ್ಲಿ ಕೇಂದ್ರಗಳಿಗೆ ವಿದ್ಯುತ್ ವ್ಯತ್ಯಯವಾಗದಂತೆ ಮುಂಜಾಗೃತಾ ಕ್ರಮ ವಹಿಸಲು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಬಸ್ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಸಿಬ್ಬಂದಿ ನೇಮಿಸಲಾಗಿದೆ. ಯಾವುದೇ ಅವಘಡಗಳು ಜರುಗದಂತೆ ಮುನ್ನಚ್ಚರಿಕೆ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.