ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿವಾಕರ ಸ್ವೀಕರಿಸುತ್ತಿದ್ದಂತೆ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಲಾಗಿದ್ದು, ಆರು ಹಿರಿಯ ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಸಿದ್ದರಾಮಯ್ಯ ಅವರಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ್ತಾಗಿದ್ದ ಅಂಜುಂ ಪರ್ವೇಜ್ ಅವರನ್ನು ಅರಣ್ಯ ಇಲಾಖೆಯ ಎಸಿಎಸ್ ಆಗಿ ವರ್ಗಾವಣೆ ಮಾಡಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತ ಮೌನೀಶ್ ಮೌದ್ಗಿಲ್ ಅವರಿಗೆ ಹೊಸದಾಗಿ ಸೃಜಿಸಿರುವ ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿ (ಕಾರ್ಯಕ್ರಮ ಮತ್ತು ಯೋಜನೆಗಳ ಅನುಷ್ಠಾನ) ಹುದ್ದೆಯ ಹೊಣೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಐಎಎಸ್ ಅಧಿಕಾರಿಗಳಾದ ದೀಪಾ ಚೋಳನ್ ಅವರನ್ನು ಸಾರಿಗೆ ಇಲಾಖೆ ಸರ್ಕಾರದ ಕಾರ್ಯದರ್ಶಿಯಾಗಿ, ಕಾವೇರಿ ಬಿ.ಬಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿ, ವೆಂಕಟೇಶ್ ಎಂ.ವಿ ಸಹಕಾರ ಸಂಘಗಳ ರಜಿಸ್ಟ್ರಾರ್ ಆಗಿ, ಸೆಲ್ವಮಣಿ ಆರ್ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಘಟಕದ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.






























