ನವದೆಹಲಿ: ಫೆಬ್ರವರಿ 19ರಂದು ದೆಹಲಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ನೂತನ ಮುಖ್ಯಮಂತ್ರಿ ಫೆಬ್ರವರಿ 20 ರಂದು ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ದೆಹಲಿಯ ನೂತನ ಸಿಎಂಅನ್ನು ಆಯ್ಕೆ ಮಾಡಲು ಬಿಜೆಪಿಯ ಹೊಸದಾಗಿ ಆಯ್ಕೆಯಾದ ಶಾಸಕರು ಇಂದು ಸಭೆ ಸೇರಬೇಕಿತ್ತು. ಆದರೆ, ಸಭೆಯನ್ನು ಬುಧವಾರಕ್ಕೆ ಮುಂದೂಡಲಾಗಿದೆ. ನಾಳೆ ನಡೆಯಬೇಕಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಮುಂದೂಡಲಾಗಿದೆ. ಈ ಸಭೆ ಫೆಬ್ರವರಿ 19 ರಂದು ನಡೆಯಲಿದೆ. ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಫೆಬ್ರವರಿ 18ರ ಬದಲು ಫೆಬ್ರವರಿ 20 ರಂದು ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.