ಈಗಾಗಲೇ ಪೋಷಕರು ಮಕ್ಕಳನ್ನು ಒಂದನೇ ತರಗತಿಗೆ ಶಾಲೆಗೆ ದಾಖಲಾತಿ ಮಾಡಿಸಲು ಸಜ್ಜಾಗಿ ನಿಂತಿದ್ದಾರೆ. ಆದರೆ ಶಿಕ್ಷಣ ಇಲಾಖೆ ಪೋಷಕರಿಗೆ ಮಕ್ಕಳಿಗೆ ಶಾಕ್ ನೀಡಿದೆ. ಜೂನ್ 1 ಕ್ಕೆ 6 ವರ್ಷ ತುಂಬಿರಬೇಕು ಎಂಬ ಶಾಲಾ ಶಿಕ್ಷಣ ಇಲಾಖೆಯ ಸುತ್ತೋಲೆ ಈಗ ಪೋಷಕರ ನಿದ್ದೆಗೆಡಿಸಿದ್ದು, ಯುಕೆಜಿ ತೇರ್ಗಡೆ ಹೊಂದಲಿರುವ ಲಕ್ಷಾಂತರ ಮಂದಿ ಮಕ್ಕಳು ದಾಖಲಾತಿ ಪಡೆಯಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಬಗ್ಗೆ ಪೋಷಕರು ಭಾರೀ ವಿರೋಧ ವ್ಯಕ್ತಪಡಿಸಿದ್ದು, ಈಗಾಗಲೇ ಲಕ್ಷಾಂತರ ಮಂದಿ ಮಕ್ಕಳು ಯುಕೆಜಿ ತೇರ್ಗಡೆ ಹೊಂದುತ್ತಿದ್ದು, 6 ವರ್ಷ ತುಂಬಲು 5,10 ದಿನಗಳಷ್ಟೇ ಬಾಕಿ ಇದೆ. ಸರ್ಕಾರದ ಈ ಸುತ್ತೋಲೆಗೆ ಪರಿಣಾಮ ಇವರೆಲ್ಲ ಒಂದನೇ ತರಗತಿಗೆ ಪ್ರವೇಶ ಸಿಗದೇ ಶೈಕ್ಷಣಿಕ ಸಮಯ ವ್ಯರ್ಥ ಮಾಡಿಕೊಳ್ಳುವ ಭೀತಿಯಲ್ಲಿ ಇದ್ದಾರೆ, ಹೀಗಾಗಿ ಸರ್ಕಾರ ಈ ನಿಯಮ ಇದೊಂದು ಬಾರಿ ಸಡಿಲಿಕೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಇದು ನ್ಯಾಯಾಲಯದ ಆದೇಶವಾಗಿದ್ದು, ನ್ಯಾಯಾಲಯದ ಆದೇಶದಂತೆ ನಡೆದುಕೊಳ್ಳುವುದಾಗಿ ತಿಳಿಸಿದೆ.
ಒಟ್ಟಾರೆ ಲಕ್ಷಾಂತರ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತಿರುವ ಈ ಆದೇಶ, ಪೋಷಕರು ಮತ್ತು ಸರ್ಕಾರದ ನಡುವಿನ ತಿಕ್ಕಾಟಕ್ಕೆ ಕಾರಣವಾಗಿದೆ.