ಬೆಳ್ತಂಗಡಿ :ಧರ್ಮಸ್ಥಳ ಪ್ರಕರಣದಲ್ಲಿ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಸೌಜನ್ಯ ಪ್ರಕರಣವನ್ನು ಎಸ್ಐಟಿ ಮತ್ತೆ ತನಿಖೆ ಮಾಡುತ್ತಾ ಎನ್ನುವ ಪ್ರಶ್ನೆ ಮೂಡಿದ್ದುಸ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪ ಹೊತ್ತು ಕ್ಲೀನ್‌ಚಿಟ್ ಪಡೆದವರಿಗೆ ವಿಶೇಷ ತನಿಖಾ ತಂಡ ವಿಚಾರಣೆಗ ಹಾಜರಾಗಲು ಸೂಚನೆ ನೀಡಿದೆ.
ಸೌಜನ್ಯ ಮನೆಯವರು ಶಾಸಕ ಉದಯ್ ಕುಮಾರ್ ಸೇರಿ ಹಲವರ ಮೇಲೆ ಆರೋಪ ಮಾಡಿದ್ದರು. ಇದೀಗ ಉದಯ್ ಕುಮಾರ್ ಜೈನ್ ಸೇರಿದಂತೆ ಧೀರಜ್ ಕೆಲ್ಲಾ, ಮಲ್ಲಿಕ್ ಜೈನ್‌ಗೆ ಎಸ್‌ಐಟಿ ಬುಲಾವ್ ನೀಡಿದೆ. ಹೀಗಾಗಿ ಆರೋಪ ಹೊತ್ತ ಉದಯ್ ಕುಮಾರ್ ಜೈನ್ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು ಸೌಜನ್ಯ ತಾಯಿ ಎಸ್‌ಐಟಿಗೆ ಕೊಟ್ಟ ದೂರಿನ ಮೇರೆಗೆ ಅಥವಾ ಚಿನ್ನಯ್ಯ ನೀಡಿದ ಕೇಳಿಕೆಯ ಕಾರಣದಿಂದಲೂ ನನ್ನನ್ನ ಎಸ್‌ಐಟಿ ಕರೆದಿರಬಹುದು. ಯಾವುದೇ ತನಿಖೆಗೂ ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ ಧರ್ಮಸ್ಥಳದ ಬರುಡೆ ಕೇಸ್ ನಡುವೆ ಎಸ್ ಐ ಟಿ (SIT)ಸದ್ದಿಲ್ಲದೇ ‘ಸೌಜನ್ಯ ಕೇಸ್’ ತನಿಖೆ ಆರಂಭಿಸಿದ್ಯಾ ಎಂಬ ಪ್ರಶ್ನೆ ಮೂಡಿದೆ.