ಚಿತ್ರದುರ್ಗ : ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದಿಂದ ಪ್ರವಾಸಿ ಮಂದಿರದಲ್ಲಿ ಗುರುವಾರ ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು.
ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡಿದ ಕರ್ನಾಟಕ ರಾಜ್ಯ ನದಾಫ್/ಪಿಂಜಾರ ಸಂಘದ ಜಿಲ್ಲಾಧ್ಯಕ್ಷ ರಶೀದ್ಸಾಬ್ ಪಿಂಜಾರ ಸಮಾಜ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಹಿಂದುಳಿದಿದ್ದು, ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಅನೇಕ ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬರಲಾಗುತ್ತಿದ್ದರೂ ಸರ್ಕಾರ ನಮ್ಮನ್ನು ನಿರ್ಲಕ್ಷಿಸುತ್ತಿರುವುದರಿಂದ ಪಿಂಜಾರ ಜನಾಂಗ ಸಂಘಟಿತರಾಗಬೇಕಿದೆ ಎಂದು ಹೇಳಿದರು.
ನದಾಫ್/ಪಿಂಜಾರ ಸಂಘದ ತಾಲ್ಲೂಕು ಅಧ್ಯಕ್ಷ ಇಮಾಮ್ಸಾಬ್, ಕಾರ್ಯದರ್ಶಿ ಮುಜಾಹಿದ್ ಪಿ.ಓ. ಹಾಜಿ ಆರ್.ದಾದಾಪೀರ್, ಬುಡೇನ್ಸಾಬ್, ಸಕೀನಾಬಿ, ಮಸ್ತಾನ್ಸಾಬ್, ವೈ.ಹೆಚ್.ಹುಸೇನ್ಪೀರ್ಸಾಬ್, ಮುಸ್ತಫ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.