LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಶಿಕ್ಷಣ ಮಂತ್ರಿ ಧರ್ಮೆಂದ್ರ ಪ್ರಧಾನ್ ರಾಜಿನಾಮೆಗೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆ

ಶಿಕ್ಷಣ ಮಂತ್ರಿ ಧರ್ಮೆಂದ್ರ ಪ್ರಧಾನ್ ರಾಜಿನಾಮೆಗೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆ

ಚಿತ್ರದುರ್ಗ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೆಹಲಿಯ ಜಂತರ್-ಮಂತರ್ನಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದು ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲಿಸಿ ಪ್ರಧಾನಿ ನರೇಂದ್ರಮೋದಿರವರ ನಿವಾಸದ ಎದುರು ಧರಣಿ ನಡೆಸಿದ ಕಾಂಗ್ರೆಸ್ ಯುವ ನಾಯಕ ರಾಹುಲ್ಗಾಂಧಿ ಬಂಧನ ಖಂಡಿಸಿ ನ್ಯಾಯವಾದಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದಿರುವವರನ್ನು ಗುರುತಿಸಿ ತಕ್ಕ ಶಿಕ್ಷೆ ನೀಡಲು ಬದಲು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಸ್ವಾತಂತ್ರ್ಯವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವ ಕೇಂದ್ರ ಸರ್ಕಾರ ಮೊದಲು ಗೂಂಡಾ ವರ್ತನೆಯನ್ನು ಕೈಬಿಡಬೇಕು. ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್ ರಾಜಿನಾಮೆ ನೀಡುವಂತೆ ಪ್ರತಿಭಟನಾನಿರತ ವಕೀಲರುಗಳು ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಕಾನೂನು ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ಅಧ್ಯಕ್ಷ ಡಿ.ಎಸ್.ಸುದರ್ಶನ್, ಉಪಾಧ್ಯಕ್ಷ ಬೀಸ್ನಳ್ಳಿ ಜಯಣ್ಣ, ನ್ಯಾಯವಾದಿಗಳಾದ ರವಿ, ಜಗದೀಶ್ ಗುಂಡೇರಿ, ಜಿ.ಶರಣಪ್ಪ, ಎನ್.ಡಿ.ಗುರುಮೂರ್ತಿ, ಕುಮಾರಣ್ಣ, ಗಂಗಾಧರ್, ತೇಜು, ಚಂದ್ರಪ್ಪ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ FIR.!ಶಿಕ್ಷಣ ಸಚಿವರ ರಾಜೀನಾಮೆ ಸೋನಮ್ ವಾಂಗ್ಚುಕ್ ಪ್ರತಿಕ್ರಿಯೆ ಹೀಗಿದೆ.!ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ.!ಸೋನಮ್ ವಾಂಗ್ಚುಕ್ ಅವರ ಬಗ್ಗೆ ಮಾತನಾಡಿದ ವಿಮರ್ಶಕರಿಗೆ ಇಲ್ಲಿದೆ ಉತ್ತರ ಶಾಪ ವಿಮೋಚನ ವಿಧಿ ಎಂಬುದು ಸನಾತನ ಧರ್ಮದಲ್ಲಿ ಹಿಂದಿನ ಜನ್ಮದ ನಕಾರಾತ್ಮಕ ಆಲೋಚನೆಗಳಿಂದ ಉಂಟಾಗುವ ಕಷ್ಟಗಳನ್ನು ದೂರ ಮಾಡಲು ಮಾಡುವ ದಿವ್ಯ ಪ್ರಕ್ರಿಯೆಯಾಗಿದೆ. ಈ ಜಿಲ್ಲೆಗಳಲ್ಲಿ ಇಂದು  ಭಾರೀ ಮಳೆ: ಶಾಲಾ ಕಾಲೇಜುಗಳಿಗೆ ರಜೆಶಿಕ್ಷಣ ಮಂತ್ರಿ ಧರ್ಮೆಂದ್ರ ಪ್ರಧಾನ್ ರಾಜಿನಾಮೆಗೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ರೈತ ಸಂಘದವರಿಂದ ಪ್ರತಿಭಟನೆಬಿಜೆಪಿ ಯಿಂದ ಕಾಂಗ್ರೆಸ್ ಗೂಂಡಾ ವರ್ತನೆ ವಿರುದ್ದ ಧಿಕ್ಕಾರ.!ಹಿರಿಯೂರು ಉಪ ಚುನಾವಣೆ: ಸಿ.ಶಿವುಯಾದವ್ ಗೆ ಕಾಂಗ್ರೆಸ್ ಟಿಕೆಟ್ ನೀಡಿ.!