ಬೆಂಗಳೂರು: ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ಬೆಲೆಯನ್ನು ಶೇ. 30ರಷ್ಟು ಹೆಚ್ಚಿಸಲು ಸರ್ಕಾರ ಮುಂದಾಗಿದೆ. !
ಇದರಿಂದ ಹೊಸದಾಗಿ ಮನೆ, ಸೈಟ್ ಹಾಗೂ ಅಪಾರ್ಟ್‌ಮೆಂಟ್ ಖರೀದಿಸುವವರಿಗೆ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಹೆಚ್ಚಾಗಿ ಆರ್ಥಿಕ ಹೊರೆ ಬೀಳಲಿದೆ. ಡಿಸೆಂಬರ್ 15 ಅಥವಾ ಜನವರಿ 1ರಿಂದ ಪರಿಷ್ಕೃತ ದರಗಳು ಜಾರಿಗೆ ಬರುವ ಸಾಧ್ಯತೆಯಿದೆ.
ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಬಹುದು.