LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಬ್ಯಾಂಕ್ ಆಫ್ ಬರೋಡಾದಲ್ಲಿ 419 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

:ಬ್ಯಾಂಕ್ ಆಫ್ ಬರೋಡಾ ತನ್ನ ವಿವಿಧ ಶಾಖೆಗಳು ಮತ್ತು ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.  ಹಿರಿಯ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಮತ್ತು ಸಹಾಯಕ ಉಪಾಧ್ಯಕ್ಷ ಸೇರಿದಂತೆ ಒಟ್ಟು 419 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ ಪದವಿ ಅಥವಾ MBA, PGDM, CA, CFA, CMA ಮುಂತಾದ ವೃತ್ತಿಪರ ಅರ್ಹತೆಗಳನ್ನು ಹೊಂದಿರಬೇಕು. ಜೊತೆಗೆ, ಅಧಿಸೂಚನೆಯಲ್ಲಿ ಸೂಚಿಸಿದಂತೆ ಸಂಬಂಧಿತ ಕ್ಷೇತ್ರದಲ್ಲಿ ಅನುಭವವೂ ಅಗತ್ಯವಾಗಿದೆ. ಹುದ್ದೆಗಳ ಪ್ರಕಾರ ವಯೋಮಿತಿ 22 ರಿಂದ 40 ವರ್ಷಗಳ ನಡುವೆ ನಿಗದಿಪಡಿಸಲಾಗಿದೆ.

ಸರಕಾರದ ನಿಯಮಗಳಂತೆ ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ, ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಪಿಎಚ್‌ಡಿ ಪಡೆದವರಿಗೆ ಹತ್ತು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಆಸಕ್ತರು ಫೆಬ್ರವರಿ 6 ರಿಂದ ಫೆಬ್ರವರಿ 26ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು . ಅರ್ಜಿ ಶುಲ್ಕವಾಗಿ ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳು ರೂ. 850 ಪಾವತಿಸಬೇಕಾಗಿದ್ದು, ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ, ಇಎಸ್‌ಎಂ, ಡಿಇಎಸ್‌ಎಂ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂ. 175 ಮಾತ್ರ ನಿಗದಿಯಾಗಿದೆ. ಈ ನೇಮಕಾತಿಯಲ್ಲಿ ಯಾವುದೇ ಲಿಖಿತ ಪರೀಕ್ಷೆ ಇರದೆ, ಅಭ್ಯರ್ಥಿಗಳ ಆಯ್ಕೆ ಸಂದರ್ಶನದ ಆಧಾರದ ಮೇಲೆ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು https://bankofbaroda.bank.in

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಟ ಮಂತ್ರದ ಶಕ್ತಿ ಇರುವ ವಸ್ತುಗಳನ್ನು ದಾರಿಯಲ್ಲಿ ಯಾವುದೇ ಕಾರಣಕ್ಕೂ ತುಳಿಯಬೇಡಿ ಅಕಸ್ಮಾತ್ ತುಳಿದರೆ ಸಮಸ್ಯೆ ಕತ್ತಿಟ್ಟ ಬುತ್ತಿ!ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ.! ಇಲ್ಲಿದೆ ವಿವರದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 05-09-2026ಸೆ.6 ರಿಂದ ಭದ್ರಾ ಮೇಲ್ದಂಡೆ ಯೋಜನೆ ಐತಿಹಾಸಿಕ ಕ್ಷಣ: ಚಿತ್ರದುರ್ಗ ಶಾಖಾ ಕಾಲುವೆಗೆ ಹರಿಯಲಿದೆ ನೀರು.!-ಚೆನ್ನಬಸವಣ್ಣ ಅವರ ವಚನ.!‘ಯುವ ದಸರಾ’ ಸಂಭ್ರಮ ಚಾಲನೆಗೆ ನಟ ಪ್ರಭುದೇವ.!ಈ ಕಾರಣಕ್ಕೆ 'ಫೋಕ್ಸ್‌ವ್ಯಾಗನ್' ಸಂಸ್ಥೆಯಲ್ಲಿ 1 ಲಕ್ಷ ಉದ್ಯೋಗಗಳಿಗೆ ಕತ್ತರಿ.!ಕಾಳಿ ಮಂತ್ರದ ಪ್ರಯೋಗ! ಮಹಾಕಾಳಿ ಯಂತ್ರ ಮಂತ್ರ ಸಿದ್ಧಿಯಿಂದ ಆಕರ್ಷಣ ವಶೀಕರಣತಂತ್ರಜ್ಞಾನ ಹಾಗೂ ಕೌಶಲಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಿ: -ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣೆಗೆ ಪ್ರೋತ್ಸಾಹ: ‘ಸ್ಪರ್ಶ' ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ