ನವೋದಯ ವಿದ್ಯಾಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ: ಹಿರಿಯೂರು ತಾಲೂಕಿನ ಉಡುವಳ್ಳಿಯಲ್ಲಿರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027–28ನೇ ಶೈಕ್ಷಣಿಕ ಸಾಲಿನ 9 ಮತ್ತು 11ನೇ ತರಗತಿಗಳ ಪ್ರವೇಶ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.
9ನೇ ತರಗತಿ ಪ್ರವೇಶ: ಚಿತ್ರದುರ್ಗ ಜಿಲ್ಲೆಯ ಖಾಯಂ ನಿವಾಸಿಯಾಗಿರುವ ಹಾಗೂ 2026-27ನೇ ಸಾಲಿನಲ್ಲಿ ಜಿಲ್ಲೆಯ ಸರ್ಕಾರಿ ಅಥವಾ ಮಾನ್ಯತೆ ಪಡೆದ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು 01.05.2012 ರಿಂದ 31.07.2014 ರ ನಡುವೆ ಜನಿಸಿರಬೇಕು. ಹಿಂದಿ, ಇಂಗ್ಲಿμï, ಗಣಿತ ಮತ್ತು ವಿಜ್ಞಾನ ವಿಷಯಗಳ ಒಎಂಆರ್ ಆಧಾರಿತ ವಸ್ತುನಿಷ್ಟ ಪರೀಕ್ಷೆ ಇರಲಿದೆ. ಆಸಕ್ತರು cbseitms.nic.in/2026/nvsix_9 ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
11ನೇ ತರಗತಿ ಪ್ರವೇಶ: ಜಿಲ್ಲೆಯ ಖಾಯಂ ನಿವಾಸಿಯಾಗಿರುವ ಮತ್ತು 2026-27ರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರು. ಅಭ್ಯರ್ಥಿಗಳು 01.06.2010 ರಿಂದ 31.07.2012 ರ ನಡುವೆ ಜನಿಸಿರಬೇಕು. ಮಾನಸಿಕ ಸಾಮಥ್ರ್ಯ, ಇಂಗ್ಲಿμï, ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ವಿಷಯಗಳ ಮೇಲೆ ಪರೀಕ್ಷೆ ನಡೆಯಲಿದೆ. ಆಸಕ್ತರು cbseitms.nic.in/2026/nvsxi_11 ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರಶ್ನೆ ಪತ್ರಿಕೆಯು ಹಿಂದಿ ಮತ್ತು ಇಂಗ್ಲಿμï ದ್ವಿಭಾμÉಯಲ್ಲಿದ್ದು, ಹೆಚ್ಚಿನ ಮಾಹಿತಿಗಾಗಿ ನವೋದಯ ವಿದ್ಯಾಲಯ ಸಮಿತಿಯ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬಹುದು ಎಂದು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.