LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಎಸ್.ಟಿ ಯುವಕರಿಗೆ ಸೋಲಾರ್ ಪಿವಿ ತರಬೇತಿಗೆ ಅರ್ಜಿ ಆಹ್ವಾನ

ಎಸ್.ಟಿ ಯುವಕರಿಗೆ ಸೋಲಾರ್ ಪಿವಿ ತರಬೇತಿಗೆ ಅರ್ಜಿ ಆಹ್ವಾನ

ಎಸ್.ಟಿ ಯುವಕರಿಗೆ ಸೋಲಾರ್ ಪಿವಿ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ನವದೆಹಲಿ ರವರ ಪಿಎಂ-ಜನ್‍ಮನ್ (PM-JANMAN) ಹಾಗೂ ಡಿಎ-ಜೆಜಿಜೆಯುಎ (DA-JGUA)  ಯೋಜನೆಯಡಿ ಗ್ರಾಮಗಳಲ್ಲಿನ ಪರಿಶಿಷ್ಟ ಪಂಗಡ ಹಾಗೂ ನೈಜ ದುರ್ಬಲ ಬುಡಕಟ್ಟು ಸಮುದಾಯದ ಯುವಕರಿಗೆ ಸೋಲಾರ್ ಪಿವಿ ಉಚಿತ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ಮಿನಿಸ್ಟ್ರಿ ಆಫ್ ನ್ಯೂ ಅಂಡ್ ರಿನ್ಯೂಯೆಬಲ್ ಎನರ್ಜಿ (MNRE)  ಸಹಯೋಗದೊಂದಿಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಸೋಲಾರ್ ಪ್ರೊಪ್ರೆನ್ಯೂರ್ಸ್ (Solar Entrepreneurs) ಕಾರ್ಯಕ್ರಮದಡಿ ಸೋಲಾರ್ ಪಿವಿ ಹೆಲ್ಪರ್-ಕಮ್-ಅಸಿಸ್ಟೆಂಟ್ ಟೆಕ್ನಿಷಿಯನ್' (Solar PV Helper-cum Assistant Technician)  ತರಬೇತಿ ನೀಡಲಾಗುತ್ತದೆ. ಈ ತರಬೇತಿ ಪಡೆಯಲು ಆಸಕ್ತಿಯಿರುವ ಪಿವಿಟಿಜಿ (PVTG)  ಮತ್ತು ಎಸ್‍ಟಿ (ST)  ಸಮುದಾಯದ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಕನಿಷ್ಠ 5ನೇ ತರಗತಿ ಉತ್ತೀರ್ಣರಾಗಿರಬೇಕು, ಓದಲು ಮತ್ತು ಬರೆಯಲು ತಿಳಿದಿರಬೇಕು ಹಾಗೂ ತರಬೇತಿಯಲ್ಲಿ ಭಾಗವಹಿಸಲು ಮತ್ತು ಅಗತ್ಯ ತಾಂತ್ರಿಕ ಕೌಶಲ್ಯಗಳನ್ನು ಕಲಿಯಲು ಆಸಕ್ತಿ ಹೊಂದಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ಹಾಗೂ ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಚಿತ್ರದುರ್ಗ (ಜೆ.ಸಿ.ಆರ್. ಬಡಾವಣೆ, 4ನೇ ಕ್ರಾಸ್ (ಪೂರ್ವ), ಗಣೇಶ ದೇವಸ್ಥಾನದ ಹತ್ತಿರ, ಚಿತ್ರದುರ್ಗ) ಅಥವಾ ಆಯಾ ತಾಲೂಕಿನ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಹಾಗೂ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಪಡೆದು ಸಲ್ಲಿಸಬಹುದು.

ಅರ್ಜಿಗಳನ್ನು ಭರ್ತಿ ಮಾಡಿ ನವೆಂಬರ್ 25ರ ಸಂಜೆ 5.30ರೊಳಗೆ ಆಯಾ ತಾಲೂಕಿನ ಕಚೇರಿಯಲ್ಲಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾತಕಗಳ ಪ್ರಕಾರ ಯಾವ ಗ್ರಹಗತಿಗಳ ತಾಂತ್ರಿಕ ಶಕ್ತಿಯಿಂದ ಆರೋಗ್ಯ ಸಮಸ್ಯೆ ಮಾನಸಿಕ ಖಿನ್ನತೆ ಹೆಚ್ಚಾಗುತ್ತದೆ ತಿಳಿದುಕೊಳ್ಳಿ!ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ದಾಳಿ..!ಐಪಿಎಲ್‌ನಿಂದ ಧೋನಿ ನಿವೃತ್ತಿ ಘೋಷಿಸಿದ್ದಾರೆ.!ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಕೆಪಿಎಸ್‌ಸಿ ಸದಸ್ಯೆ ಬಿ.ವಿ. ಗೀತಾ ಶಿವಮೂರ್ತಿ ಕಸ್ಟಡಿ..!ಪ್ರೆವೆಂಟ್ ಶೋಯಿಂಗ್ ಬೆಳೆ ವಿಮೆ ತುರ್ತಾಗಿ ನೀಡುವಂತೆ ರೈತ ಸಂಘ ಒತ್ತಾಯ..!ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆಎಸ್.ಟಿ ಯುವಕರಿಗೆ ಸೋಲಾರ್ ಪಿವಿ ತರಬೇತಿಗೆ ಅರ್ಜಿ ಆಹ್ವಾನ18-11-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ-ಸತ್ಯಕ್ಕ  ಅವರ ವಚನ.ವಾಮಾಚಾರಕ್ಕೆ ಮಾಟ ಮಂತ್ರ ದೂಷಕ್ಕೆ ಶತ್ರು ದೃಷ್ಟಿಗೆ ಜನ ದೃಷ್ಟಿಗೆ ದೃಷ್ಟಿಯಿಂದ ಈ ಶಕ್ತಿಶಾಲಿ ಯಂತ್ರವನ್ನು ಧಾರಣೆ ಮಾಡಿ!