ಚಿತ್ರದುರ್ಗ: ಜಿಲ್ಲೆಯ ಪದವಿ ಪೂರ್ವ ಹಾಗೂ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮಾನಸಿಕ ಮತ್ತು ಭಾವನಾತ್ಮಕ ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ನೀಡಲು ಜಿಲ್ಲೆಯ ಆರು ಬ್ಲಾಕ್‍ಗಳ ಸಂಪನ್ಮೂಲ ಕೇಂದ್ರಗಳಿಗೆ ಒಬ್ಬರಂತೆ ‘ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ’ಯನ್ನು ಸಮಾಲೋಚಕ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮನೋವಿಜ್ಞಾನ, ಕ್ಲಿನಕಲ್ ಮನೋವಿಜ್ಞಾನ, ಕೌನ್ಸೆಲಿಂಗ್ ಮನೋವಿಜ್ಞಾನ ವಿಷಯದಲ್ಲಿ ಎಂ.ಎ/ಎಂ.ಎಸ್ಸಿ ಪದವಿ ಪಡೆದಿದ್ದು, ಶಾಲೆ ಅಥವಾ ಸಮುದಾಯ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷದ ಸೇವಾ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜೊತೆಗೆ ಕನ್ನಡ, ಇಂಗ್ಲಿಷ್ ಹಾಗೂ ಮೂಲಭೂತ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ.
ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ಮತ್ತು ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ 2026ರ ಸೆಪ್ಟೆಂಬರ್ 03 ಸಂಜೆ 5 ಗಂಟೆಯೊಳಗೆ ‘ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾಧಿಕಾರಿಗಳ ಕಚೇರಿ, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ’ ಇಲ್ಲಿಗೆ ಖುದ್ದಾಗಿ ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಕೆಲಸದ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ..