LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಕಾಡುಗೊಲ್ಲ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕಾಡುಗೊಲ್ಲ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಕಾಡುಗೊಲ್ಲ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ನಿಯಮಿತದಿಂದ 2026-27ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದ್ದು, ‘ಅರಿವು' ಶೈಕ್ಷಣಿಕ ಸಾಲ ಯೋಜನೆಗೆ ಕೊನೆಯ ದಿನಾಂಕ ಅನ್ವಯಿಸುವುದಿಲ್ಲ. ಅರ್ಹ ಅಭ್ಯರ್ಥಿಗಳುಸೇವಾ ಸಿಂಧು' ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಯೋಜನೆಯಡಿ ಸ್ವಯಂ ಉದ್ಯೋಗ ನೇರಸಾಲು ಯೋಜನೆ, ಅರಿವು-ಶೈಕ್ಷಣಿಕ ನೇರಸಾಲು ಯೋಜನೆ (ಹೊಸದು), ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ (ಟ್ಯಾಕ್ಸಿ/ಟ್ರಾಕ್ಟರ್) ಹಾಗೂ ಹೊಲಿಗೆ ಯಂತ್ರ / Zig Zag ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು. ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸುವವರು ಕನಿಷ್ಟ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಒಂದೇ ಸ್ಥಳದಲ್ಲಿ ಹೊಂದಿರಬೇಕು.

ಅರ್ಜಿದಾರರು ಕರ್ನಾಟಕ ರಾಜ್ಯದ ಕಾಯಂ ನಿವಾಸಿಯಾಗಿರಬೇಕು ಹಾಗೂ ಕಾಡುಗೊಲ್ಲ ಜಾತಿಗೆ ಸೇರಿದವರಾಗಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯವಾಗಿದ್ದು, ವಯೋಮಿತಿ 18 ರಿಂದ 55 ವರ್ಷದೊಳಗಿರಬೇಕು. ಅರಿವು ಯೋಜನೆಗೆ 18 ರಿಂದ 30 ವರ್ಷ (ವಾರ್ಷಿಕ ಆದಾಯ ರೂ. 3.50 ಲಕ್ಷ ಮಿತಿ) ಮತ್ತು ಸ್ವಾವಲಂಬಿ ಸಾರಥಿ ಯೋಜನೆಗೆ 21 ರಿಂದ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ ಗರಿಷ್ಠ ರೂ. 98,000/- ಹಾಗೂ ನಗರ ಪ್ರದೇಶದವರಿಗೆ ಗರಿಷ್ಠ ರೂ. 1,20,000/- ಇರಬೇಕು. ಅರ್ಜಿದಾರರ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಕಡ್ಡಾಯವಾಗಿ ಜೋಡಣೆಯಾಗಿರಬೇಕು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಲಭ್ಯವಿದ್ದು, ಹಿಂದೆ ನಿಗಮ ಅಥವಾ ಸರ್ಕಾರದಿಂದ ಯಾವುದೇ ಸೌಲಭ್ಯ ಪಡೆದಿರಬಾರದು.

ಆಯ್ಕೆ ಪ್ರಕ್ರಿಯೆಯಲ್ಲಿ ಮಹಿಳೆಯರಿಗೆ ಶೇ. 33, ವಿಕಲಚೇತನರಿಗೆ ಶೇ. 5 ಹಾಗೂ ತೃತೀಯ ಲಿಂಗಿಗಳಿಗೆ ಶೇ. 1 ರಷ್ಟು ವಿಶೇಷ ಮೀಸಲಾತಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ಅಥವಾ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 7899899039/080-22374848 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕ ಹೆಚ್.ಸಿ.ಸಾತ್ವಿಕ್ ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶತ್ರು ಸಂಹಾರಕ್ಕೆ ಬಲಿಷ್ಠ ತಾಂತ್ರಿಕ ತಂತ್ರ ಲಿಂಬೆಹಣ್ಣಿನ ಸಹಾಯದಿಂದ ನಿಮ್ಮ ಶತ್ರುವನ್ನು ಸರ್ವನಾಶ ಮಾಡಬಹುದು!ಶತ್ರು ಸಂಹಾರಕ್ಕೆ ಬಲಿಷ್ಠ ತಾಂತ್ರಿಕ ತಂತ್ರ ಲಿಂಬೆಹಣ್ಣಿನ ಸಹಾಯದಿಂದ ನಿಮ್ಮ ಶತ್ರುವನ್ನು ಸರ್ವನಾಶ ಮಾಡಬಹುದು!ಈ ಕಾರಣಕ್ಕೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ.!ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ :ಕರಿಕೆರೆ ಗ್ರಾಮದಲ್ಲಿ ಸುಮಾರು ಹತ್ತು ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ: ಪ್ರತಿಭಟನೆ.!ಗೌರಸಂದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ.ನಾಳೆ ಸೆ.24ರಂದು ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ-ಅರಿವಿನ ಮಾರಿತಂದೆ ಅವರ ವಚನ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 22-09-2026ಕಾಡುಗೊಲ್ಲ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ