ಚಿತ್ರದುರ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಜಿಲ್ಲೆಯ ಅರ್ಹ ಕ್ರೀಡಾಪಟುಗಳಿಗೆ ವಿವಿಧ ಪ್ರಶಸ್ತಿಗಳು, ಪ್ರೋತ್ಸಾಹಧನ ಹಾಗೂ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನ.
2026-27ನೇ ಸಾಲಿನ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, 2025ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಹಾಗೂ ನಗದು ಪುರಸ್ಕಾರಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಇದರೊಂದಿಗೆ 2025-26ನೇ ಸಾಲಿನ ಕ್ರೀಡಾ ವಿದ್ಯಾರ್ಥಿ ವೇತನ ಹಾಗೂ 2026-27ನೇ ಸಾಲಿನ ಗುರಿ-ಒಲಂಪಿಕ್ ಪದಕ ಮತ್ತು ಶೈಕ್ಷಣಿಕ ಶುಲ್ಕ ಮರುಪಾವತಿ ಸೌಲಭ್ಯಗಳಿಗೂ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾಪಟುಗಳು ಸರ್ಕಾರದ ಅಧಿಕೃತ ಸೇವಾಸಿಂಧು ಜಾಲತಾಣದ https://sevasindhu.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಜುಲೈ 31ರ ಒಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗಿ ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 08194-235635 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
(AI ಚಿತ್ರ )