LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

-ಬಾಹೂರ ಬೊಮ್ಮಣ್ಣ  ಅವರ ವಚನ.!

-ಬಾಹೂರ ಬೊಮ್ಮಣ್ಣ  ಅವರ ವಚನ.!

-ಬಾಹೂರ ಬೊಮ್ಮಣ್ಣ  ಅವರ ವಚನ.!

 

ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು   ನಿಮ್ಮಗಳ ಅವಗಾಹನೆಗೆ  

ವಚನ:

ಆತ್ಮ ಒಂದೆಂದಲ್ಲಿ, ಇಂದ್ರಿಯಂಗಳು ಹಲವು ತೆರನಾದವು ನೋಡಾ.

ವಾಯು ಒಂದೆಂದಡೆ, ಒಂಬತ್ತು ಸಂಧಿಸಿದವು ನೋಡಾ.

ಇಂದ್ರಿಯ ಒಂದೆಂದಡೆ, ನಾಲ್ಕು ಸಂದಣಿಸಿದವು ನೋಡಾ.

ಮದ ಒಂದೆಂದಡೆ, ಏಳು ಸಂಭ್ರಮಿಸುತಿವೆ ನೋಡಾ.

ಕಳೆ ಒಂದೆಂದಡೆ, ಹದಿನೈದು ಹಿಂಗದಿವೆ ನೋಡಾ.

ಇಂತೀ ಸ್ಥೂಲತನು ಒಂದೆಂದಡೆ, ಸೂಕ್ಷ್ಮಕಾರಣ ದ್ವಂದ್ವವಾಗಿವೆ ನೋಡಾ.

ಜೀವ ಒಂದೆಂದಡೆ, ಪರಮಾತ್ಮನೆಂದು ತ್ರಿವಿಧ ಸಂಗವಾಗಿದೆ ನೋಡಾ.

ಅರಿದೆನೆಂಬಲ್ಲಿ ಹಿಂದೊಂದು ಮರವೆ, ಮರೆದೆನೆಂಬಲ್ಲಿ ಮುಂದೊಂದರಿವು.

ಇಂತೀ ದಂಪತಿ ಸಂಗವುಳ್ಳನ್ನಕ್ಕ ಏನನಹುದೆಂಬೆ, ಏನನಲ್ಲಾ ಎಂಬೆ !

ನುಡಿದಡೆ ಸಮಯಕ್ಕೆ ದೂರ, ಸುಮ್ಮನಿದ್ದಡೆ ಸ್ವಾನುಭಾವಕ್ಕೆ ದೂರ.

ಆರೆಂದಡೂ ಎನಲಿ, ಆವ ಸ್ಥಲದಲ್ಲಿ ನಿಂದಡೂ ಭಕ್ತಿಸ್ಥಲವೆ.

ವಸ್ತುವ ನೆಮ್ಮುವುದಕ್ಕೆ ವಿಶ್ವಾಸ.ಇದು ಸಂಗನಬಸವಣ್ಣನ ಕಟ್ಟು, ಬ್ರಹ್ಮೇಶ್ವರಲಿಂಗವ ಮುಟ್ಟುವ ಗೊತ್ತು.

 

-ಬಾಹೂರ ಬೊಮ್ಮಣ್ಣ

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 08-09-2026ಮನುಷ್ಯರನ್ನು ಜಾತಿ ಮತ್ತು ಧರ್ಮದ ಆಧಾರದ ಮೇಲೆ ವಿಭಜಿಸಬಾರದು ಶ್ರೀ ಶಾಂತವೀರ ಶರಣರು.!ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ-ಬಾಹೂರ ಬೊಮ್ಮಣ್ಣ  ಅವರ ವಚನ.!ಹೆಣ್ಣು ಮನಸ್ಸು ಮಾಡಿದರೆ ಏನ್ನನಾದರೂ ಸಾಧನೆಮಾಡಬಹುದು: ಮಾದಾರ ಚನ್ನಯ್ಯ ಶ್ರೀರೈತರೊಂದಿಗೆ ಸಂವಾದ: ಚಿತ್ರದುರ್ಗ ಶಾಖಾ ಕಾಲುವೆಗೆ ಪುನಃ ನೀರು ಹರಿಸಿದ ಸಚಿವ ಟಿ. ರಘುಮೂರ್ತಿಹಿರೇಕಬ್ಬಿಗೆರೆ ಹಾಲು ಉತ್ಪಾದಕರ ಸಂಘದಲ್ಲಿ ಅಕ್ರಮ ವ್ಯವಹಾರ.!ಶ್ರೀ ಬಸವೇಶ್ವರ ದೇವಸ್ಥಾನದಲ್ಲಿನ ಬಸವೇಶ್ವರ ಮೂರ್ತಿಗೆ ರುದ್ರಾಭಿಷೇಕ.!ಮಲಯಾಳಂ ಶತ್ರುನಾಶ ತಂತ್ರ ಭಾನುವಾರದ ದಿನ ಮಾಡಿ ಐದು ದಿನಗಳಲ್ಲಿ ಕೆಲಸ ಆಗುತ್ತದೆ5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೆ ಆಗ್ರಹಿಸಿ ಬ್ಯಾಂಕ್ ನೌಕರರು ಸೆ.11 ರಂದು ಪ್ರತಿಭಟನೆ