ದಾವಣಗೆರೆ: ಪ್ರಸಕ್ತ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾμÁ ಸಂವರ್ಧನೆ, ಕಲೆ, ಸಂವರ್ಧನೆ, ಕಲೆ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ, ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ ಸಂಸ್ಥೆಗಳಿಗೆ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಧನಸಹಾಯಕ್ಕಾಗಿ, ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ, ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲಾಗುವುದು. sevasindhu.karnataka.gov.in ಮುಖಾಂತರ ಆಗಸ್ಟ್ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ www.kannadasiri.karnataka.govಬಥವಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಾವಣಗೆರೆ ಹಾಗೂ ಜಿಲ್ಲಾ ವ್ಯವಸ್ಥಾಪಕರು ಇವರನ್ನು 0802410547, 08022213530, 9986837037, 08022241325 ಸಂಪರ್ಕಿಸಬೇಕೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.