-ಚೆನ್ನಬಸವಣ್ಣ ಅವರ ವಚನ.!
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಶೀಲ ಶೀಲವೆಂದು ನುಡಿವ ಉದ್ದೇಶಪ್ರಾಣಿಗಳು ಎಲ್ಲರೂ ಅನಂತಶೀಲರು,
ಅರಿವಿನ ನಿರ್ಣಯವನರಿಯರು.
ಹೊರಗೆ ಬಳಸುವರು, ಒಳಗಣ ಶುದ್ಧಿಯನರಿಯರು.
ನೇಮಶೀಲವೆಂದು ಹಿಡಿವರು, ನಿರ್ಣಯವನರಿಯರಾಗಿ,
ಕೂಡಲಚೆನ್ನಸಂಗಯ್ಯನಲ್ಲಿ ಉದ್ದೇಶಪ್ರಾಣಿಗಳು.
-ಚೆನ್ನಬಸವಣ್ಣ