ಚಿತ್ರದುರ್ಗ: ಚಿತ್ರದುರ್ಗದ ಹಳೇ ಬೆಂಗಳೂರು ರಸ್ತೆಯಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಆವರಣದಲ್ಲಿ ಇದೇ ಜುಲೈ 22ರಂದು ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
‘ವಿಪ್ರೋ ಕವಾಸಕಿ' ಕಂಪನಿಯ ಸಹಯೋಗದೊಂದಿಗೆ ಈ ಉದ್ಯೋಗ ಮೇಳ ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ವಿವಿಧ ಸೌಲಭ್ಯಗಳೊಂದಿಗೆ ಉದ್ಯೋಗಾವಕಾಶ ಕಲ್ಪಿಸಲಾಗುವುದು
ಉದ್ಯೋಗ ಮೇಳವು ಜುಲೈ 22 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ರವರೆಗೆ ಚಿತ್ರದುರ್ಗದ ಕುಂಚಿಗನಾಳ್‍ನಲ್ಲಿರುವ ಜಿಟಿಟಿಸಿ ಕಾಲೇಜು ಆವರಣದಲ್ಲಿ ನಡೆಯಲಿದೆ. ಡಿಪ್ಲೊಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್, ಆಟೋಮೊಬೈಲ್ ಇಂಜಿನಿಯರಿಂಗ್, ಟೂಲ್ ಇಂಜಿನಿಯರಿಂಗ್, ಪ್ರೆಸಿಷನ್ ಮ್ಯಾನುಫ್ಯಾಕ್ಚರಿಂಗ್ ಅಥವಾ ಇದಕ್ಕೆ ತತ್ಸಮಾನ ಕೋರ್ಸ್‍ಗಳನ್ನು ಮುಗಿಸಿದ ಅಭ್ಯರ್ಥಿಗಳು ಇದರಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 16,000 ಆಕರ್ಷಕ ವೇತನದೊಂದಿಗೆ ದಿನಕ್ಕೆ 2 ಬಾರಿ ಊಟ ಹಾಗೂ ಉಚಿತ ಸಾರಿಗೆ ಸೌಲಭ್ಯ ಸಿಗಲಿದೆ. ಇದರೊಂದಿಗೆ ಸರ್ಕಾರದ ಅಧಿಕೃತ ಪ್ರಮಾಣಪತ್ರವೂ ದೊರೆಯಲಿದ್ದು, ಬೆಂಗಳೂರಿನ ಕುಂಬಳಗೋಡು ಅಥವಾ ಬಿಡದಿಯಲ್ಲಿ ಕೆಲಸ ಮಾಡಲು ಅವಕಾಶವಿರುತ್ತದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9738465834, 9481866855, 9945616114 ಈ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಚಿದು ಚಿತ್ರದುರ್ಗ ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.
( AI ಚಿತ್ರ )