LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ನಡೆದ ಪರೀಕ್ಷೆಯ ಕೀ ಉತ್ತರ ಪ್ರಕಟ.!

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ನಡೆದ ಪರೀಕ್ಷೆಯ ಕೀ ಉತ್ತರ ಪ್ರಕಟ.!

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ನಡೆದ ಪರೀಕ್ಷೆಯ ಕೀ ಉತ್ತರ ಪ್ರಕಟ.!

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕಲ್ಯಾಣ ಕರ್ನಾಟಕ ವೃಂದದ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ‘ಕೀ ಉತ್ತರಗಳನ್ನು (Key Answers) ಪ್ರಕಟಿಸಿದೆ.

ಆಗಸ್ಟ್ 02, 2026 ರಂದು ನಡೆದ ಸಾಮಾನ್ಯ ಜ್ಞಾನ ವಿಷಯದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಆಗಸ್ಟ್ 03, 2026 ರಂದು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

 

ಆಕ್ಷೇಪಣೆ ಸಲ್ಲಿಕೆಗೆ ಮುಖ್ಯ ವಿವರಗಳು:

ಆನ್‌ಲೈನ್ ಪೋರ್ಟಲ್: ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಗಳನ್ನು KEA ಅಧಿಕೃತ

ಕೊನೆಯ ದಿನಾಂಕ: ಆಗಸ್ಟ್ 06, 2026 ರ ಬೆಳಿಗ್ಗೆ 10:30 ಗಂಟೆಯೊಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಶುಲ್ಕ: ಸಲ್ಲಿಸುವ ಪ್ರತಿಯೊಂದು ಆಕ್ಷೇಪಣೆಗೆ ರೂ. 25/- ಶುಲ್ಕ ಪಾವತಿಸಬೇಕಾಗುತ್ತದೆ (ಈ ಶುಲ್ಕವನ್ನು ಹಿಂತಿರುಗಿಸಲಾಗುವುದಿಲ್ಲ).

ಸಲ್ಲಿಸಬೇಕಾದ ವಿವರಗಳು: ಆಕ್ಷೇಪಣೆ ಸಲ್ಲಿಸುವಾಗ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಬೆಂಬಲಿತ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ.

ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದಿರುವ, ಅಪೂರ್ಣ/ಆಧಾರರಹಿತವಾಗಿರುವ ಮತ್ತು ನಿಗದಿತ ಶುಲ್ಕ ಪಾವತಿಸದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿಷಯ ತಜ್ಞರ ಸಮಿತಿಯು ಆಕ್ಷೇಪಣೆಗಳನ್ನು ಪರಿಶೀಲಿಸಿ ನೀಡುವ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು KEA ಕಾರ್ಯಾನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST