ದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ನವೆಂಬರ್ 1ರಂದು ಇಂಡಿ ಒಕ್ಕೂಟ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ಕಾಕ್ರೋಚ್ ಜನತಾ ಪಾರ್ಟಿ ಬೆಂಬಲ ಘೋಷಿಸಿದೆ.
ಚುನಾವಣಾ ಆಯೋಗದ ಮತದಾರರ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೆ ಧಕ್ಕೆ ತರುತ್ತಿದೆ ಮತ್ತು ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯುವ ಆತಂಕ ಸೃಷ್ಟಿಸಿದೆ ಎಂದು ಸಿಜೆಪಿ ಕಿಡಿ ಕಾರಿದೆ.