LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಚೋಳಘಟ್ಟ ಗ್ರಾಮ  ಪಂಚಾಯಿತಿಯಲ್ಲಿ ಸ್ವಚ್ಛತಾ ಶ್ರಮದಾನ

ಚೋಳಘಟ್ಟ ಗ್ರಾಮ  ಪಂಚಾಯಿತಿಯಲ್ಲಿ ಸ್ವಚ್ಛತಾ ಶ್ರಮದಾನ

 

ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಚೋಳಗಟ್ಟ ಗ್ರಾಮ ಪಂಚಾಯಿತಿಯಲ್ಲಿ ‘ಸ್ವಚ್ಛತಾ ಹೀ ಸೇವಾ-2026’ ಆಂದೋಲನದ ಭಾಗವಾಗಿ ‘ಏಕ್ ದಿನ್, ಏಕ್ ಘಂಟಾ, ಏಕ್ ಸಾಥ್’ ಅಭಿಯಾನದಡಿ ಶುಕ್ರವಾರ ಸ್ವಚ್ಛತಾ ಶ್ರಮದಾನ ನಡೆಯಿತು.

ಗ್ರಾಮ ಪಂಚಾಯಿತಿ ಕಾರ್ಯಾಲಯದ ಆವರಣ ಹಾಗೂ ಸುತ್ತಮುತ್ತಲಿನ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ ಶ್ರಮದಾನಿಗಳು, ಪರಿಸರ ನೈರ್ಮಲ್ಯದ ಕುರಿತು ಜಾಗೃತಿ ಮೂಡಿಸಿದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವೀರೆಶ್ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ರೋಗರುಜಿನಗಳಿಂದ ದೂರವಿರಬಹುದು. ಸ್ವಚ್ಛತೆ ಎನ್ನುವುದು ಕೇವಲ ಒಂದು ದಿನದ ಆಚರಣೆಯಾಗದೆ ನಿರಂತರ ಅಭ್ಯಾಸವಾಗಬೇಕು ಎಂದರು.
ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಜಿಲ್ಲಾ ಎಸ್ಡಬ್ಲ್ಯೂಎಂ ಸಮಾಲೋಚಕರಾದ ಪ್ರಮೀಳಾ, ಐಇಸಿ ಸಮಾಲೋಚಕರಾದ ನಾಗರಾಜ್, ಗ್ರಾಮ ಪಂಚಾಯಿತಿ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮದ ಮುಖಂಡರು ಮತ್ತು ಸಾರ್ವಜನಿಕರು ಶ್ರಮದಾನದಲ್ಲಿ ಭಾಗವಹಿಸಿದ್ದರು..!

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST