ಕಿತ್ತೂರು: ಕಿತ್ತೂರು ಕರ್ನಾಟಕ ಭಾಗದ ಜನರ ದೀರ್ಘಕಾಲದ ಬೇಡಿಕೆಗೆ ಕೊನೆಗೂ ಮನ್ನಣೆ ಸಿಕ್ಕಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು (NWKRTC) ಇನ್ಮುಂದೆ 'ಕಿತ್ತೂರು ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ' ಎಂದು ಮರುನಾಮಕರಣ ಮಾಡಲಾಗುವುದು ಎಂದು CM DK ಶಿವಕುಮಾರ್ ಘೋಷಿಸಿದ್ದಾರೆ.
ಕಿತ್ತೂರು ಉತ್ಸವದ ಸಮಾರಂಭದಲ್ಲಿ ಭಾಗಿಯಾದ ಅವರು, ವೀರರಾಣಿ ಚನ್ನಮ್ಮ ಅವರ ಪ್ರತಿಮೆಗೆ ಗೌರವ ಸಲ್ಲಿಸಿ, ಈ ಮಹತ್ವದ ನಿರ್ಧಾರ ಪ್ರಕಟಿಸಿದರು. ಶೀಘ್ರದಲ್ಲೇ ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಲಿದೆ.