LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಬಿಜೆಪಿ ಯಿಂದ ಕಾಂಗ್ರೆಸ್ ಗೂಂಡಾ ವರ್ತನೆ ವಿರುದ್ದ ಧಿಕ್ಕಾರ.!

 

ಚಿತ್ರದುರ್ಗ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೋರಾಟದ ನೆಪದಲ್ಲಿ ಅರಾಜಕತೆ ಸೃಷ್ಟಿಸುತ್ತಿರುವ ಕಾಂಗ್ರೆಸ್ ವಿರುದ್ದ ಭಾರತೀಯ ಜನತಾಪಾರ್ಟಿಯಿಂದ ನಗರದ ಒನಕೆ ಓಬವ್ವ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಗೂಂಡಾ ವರ್ತನೆ ವಿರುದ್ದ ಧಿಕ್ಕಾರಗಳನ್ನು ಕೂಗಲಾಯಿತು.

ಒನಕೆ ಓಬವ್ವ ವೃತ್ತದಲ್ಲಿ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಕೆಪಿಸಿಸಿ. ಕಚೇರಿ ಎದುರು ಪ್ರತಿಭಟನೆ ನಡೆಸಿದ ಶಾಸಕ ಬಿ.ಪಿ.ಹರೀಶ್ ಹಾಗೂ ಮಾಜಿ ಮಂತ್ರಿ ಅಶ್ವಥ್ನಾರಾಯಣರವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆಗಳನ್ನು ಎಸೆದಿರುವುದು ಅತ್ಯಂತ ಖಂಡನೀಯ. ನೇರವಾಗಿ ನಿಂತು ಹೋರಾಟ ಮಾಡುವ ಶಕ್ತಿಯಿಲ್ಲದ ಕಾಂಗ್ರೆಸ್ನವರು ಕದ್ದುಮುಚ್ಚಿ ಬಿಜೆಪಿ.ನಾಯಕರುಗಳ ಮೇಲೆ ಹಲ್ಲೆಗೆ ಮುಂದಾಗಿರುವುದಕ್ಕೆ ಕಾಂಗ್ರೆಸ್ ನಾಯಕರುಗಳು ಉತ್ತರಿಸಬೇಕು. ಆಡಳಿತ ಪಕ್ಷದ ವಿರುದ್ದ ವಿರೋಧ ಪಕ್ಷದವರು ಹೋರಾಟ ಮಾಡುವುದನ್ನು ತಡೆಯಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿಲ್ಲ. ದೆಹಲಿ ಹೋರಾಟದಲ್ಲಿ ಏಕಾಏಕಿ ರಾಹುಲ್ಗಾಂಧಿ ಕಾಣಿಸಿಕೊಂಡು ಪ್ರಧಾನಿ ಮೋದಿರವರ ನಿವಾಸದ ಎದುರು ಧರಣಿ ನಡೆಸಿ ಹೋರಾಟದ ಕೀರ್ತಿ, ಯಶಸ್ಸನ್ನು ಪಡೆಯಲು ಹೊರಟಿರುವುದರಲ್ಲಿ ಅರ್ಥವಿಲ್ಲ. ಕೊತ್ವಾಲ್ ಶಿಷ್ಯರಾಗಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ. ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಇವರುಗಳು ಕರ್ನಾಟಕವನ್ನು ಗೂಂಡಾ ರಾಜ್ಯವನ್ನಾಗಿ ಮಾಡಲು ಹೊರಟಿದ್ದಾರೆಂದು ಕಿಡಿಕಾರಿದರು.

ಮೂರು ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರ ನಡೆಸುತ್ತಿದೆ. ಉಳಿದ 22 ರಾಜ್ಯಗಳಲ್ಲಿ ಬಿಜೆಪಿ. ಎನ್ಡಿಎ. ಅಧಿಕಾರದಲ್ಲಿದೆ. ಹದಿಮೂರು ವರ್ಷಗಳಲ್ಲಿ ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಿಲ್ಲ. ವಿದ್ಯಾರ್ಥಿಗಳ ಹೋರಾಟವನ್ನು ಕಾಂಗ್ರೆಸ್ ನಾಯಕರುಗಳು ಬೇರೆ ದಿಕ್ಕಿಗೆ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದಾರೆ. ದೇಶ ವಿಭಜಿಸುವ ಶಕ್ತಿಯನ್ನು ಮುಂದಿಟ್ಟುಕೊಂಡು ರಾಹುಲ್ಗಾಂಧಿ ದೇಶದಲ್ಲಿ ಅಶಾಂತಿಯನ್ನುಂಟು ಮಾಡುತ್ತಿರುವುದು ಸರಿಯಲ್ಲ.

ಜಂತರ್-ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸಿದ ಹೋರಾಟದಲ್ಲಿ ಭಯೋತ್ಪಾದಕರು ಸೇರಿಕೊಂಡಿದ್ದಾರೆ. ವಿದೇಶಿ ಕೈಗೊಂಬೆಯಾಗಿರುವ ರಾಹುಲ್ಗಾಂಧಿ ಖಲಿಸ್ಥಾನಿಗಳನ್ನು ಜೊತೆಯಲ್ಲಿಟ್ಟುಕೊಂಡಿದ್ದಾರೆ. ಶಾಂತಿಪ್ರಿಯರನ್ನು ಪ್ರಚೋದಿಸಲು ನಾವುಗಳು ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕರುಗಳಿಗೆ ಕೆ.ಎಸ್.ನವೀನ್ ಎಚ್ಚರಿಸಿದರು.

ಬಿಜೆಪಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ಯಾದವ್, ಡಾ.ಮಂಜುನಾಥ್, ಉಪಾಧ್ಯಕ್ಷರುಗಳಾದ ರವಿಕುಮಾರ್, ಮಂಜುನಾಥ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗರಾಜ್, ಯುವ ಮೋರ್ಚಾ ಅಧ್ಯಕ್ಷ ಅರುಣ್ಕುಮಾರ್, ಕಾರ್ಯದರ್ಶಿ ರೇಖ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಭಾರ್ಗವಿ ದ್ರಾವಿಡ್, ಎಸ್ಸಿ. ಮೋರ್ಚಾ ಅಧ್ಯಕ್ಷ ಪರಶುರಾಂ, ಎಸ್ಟಿ.ಮೋರ್ಚಾ ಗ್ರಾಮಾಂತರ ಅಧ್ಯಕ್ಷ ಪ್ರಸಾದ್ಬಾಬು, ಶೈಲಜಾರೆಡ್ಡಿ, ವಕ್ತಾರ

ದಗ್ಗೆಶಿವಪ್ರಕಾಶ್, ಲೋಕೇಶ್, ಶಂಭು ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ FIR.!ಶಿಕ್ಷಣ ಸಚಿವರ ರಾಜೀನಾಮೆ ಸೋನಮ್ ವಾಂಗ್ಚುಕ್ ಪ್ರತಿಕ್ರಿಯೆ ಹೀಗಿದೆ.!ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ.!ಸೋನಮ್ ವಾಂಗ್ಚುಕ್ ಅವರ ಬಗ್ಗೆ ಮಾತನಾಡಿದ ವಿಮರ್ಶಕರಿಗೆ ಇಲ್ಲಿದೆ ಉತ್ತರ ಶಾಪ ವಿಮೋಚನ ವಿಧಿ ಎಂಬುದು ಸನಾತನ ಧರ್ಮದಲ್ಲಿ ಹಿಂದಿನ ಜನ್ಮದ ನಕಾರಾತ್ಮಕ ಆಲೋಚನೆಗಳಿಂದ ಉಂಟಾಗುವ ಕಷ್ಟಗಳನ್ನು ದೂರ ಮಾಡಲು ಮಾಡುವ ದಿವ್ಯ ಪ್ರಕ್ರಿಯೆಯಾಗಿದೆ. ಈ ಜಿಲ್ಲೆಗಳಲ್ಲಿ ಇಂದು  ಭಾರೀ ಮಳೆ: ಶಾಲಾ ಕಾಲೇಜುಗಳಿಗೆ ರಜೆಶಿಕ್ಷಣ ಮಂತ್ರಿ ಧರ್ಮೆಂದ್ರ ಪ್ರಧಾನ್ ರಾಜಿನಾಮೆಗೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ರೈತ ಸಂಘದವರಿಂದ ಪ್ರತಿಭಟನೆಬಿಜೆಪಿ ಯಿಂದ ಕಾಂಗ್ರೆಸ್ ಗೂಂಡಾ ವರ್ತನೆ ವಿರುದ್ದ ಧಿಕ್ಕಾರ.!ಹಿರಿಯೂರು ಉಪ ಚುನಾವಣೆ: ಸಿ.ಶಿವುಯಾದವ್ ಗೆ ಕಾಂಗ್ರೆಸ್ ಟಿಕೆಟ್ ನೀಡಿ.!