ದಾವಣಗೆರೆ; 66/11 ಕೆ.ವಿ. ಆನಗೋಡು ಹಾಗೂ ಅತ್ತೀಗೆರೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 27 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗ ಹಾಗೂ ಅತ್ತಿಗೆರೆ ವಿದ್ಯುತ್ ಕೇಂದ್ರದಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯಾಗಲಿದೆ.
ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.