LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಕನ್ನಡ ಮತ್ತು ಸಂಸ್ಕøತಿ ಇಲಾಖೆ: ಧನಸಹಾಯ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕನ್ನಡ ಮತ್ತು ಸಂಸ್ಕøತಿ ಇಲಾಖೆ: ಧನಸಹಾಯ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕನ್ನಡ ಮತ್ತು ಸಂಸ್ಕøತಿ ಇಲಾಖೆ: ಧನಸಹಾಯ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಚಿತ್ರದುರ್ಗ: ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ 2026-27ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ನೀಡಲಾಗುವ ಧನಸಹಾಯ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಕಾಲಾವಧಿಯನ್ನು ಸೆಪ್ಟೆಂಬರ್ 04 ರವರೆಗೆ ವಿಸ್ತರಿಸಲಾಗಿದೆ.

ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ ಹಾಗೂ ನೃತ್ಯ ಕಲಾಪ್ರಕಾರಗಳನ್ನು ಬೆಳೆಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಸಾಂಸ್ಕøತಿಕ ಚಟುವಟಿಕೆಗಳ ಧನಸಹಾಯ, ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣ ಖರೀದಿ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ನೀಡಲಾಗುವ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಆಸಕ್ತರು ಸೇವಾ ಸಿಂಧು ಪೆÇೀರ್ಟಲ್ Sevasindhu.karnataka.gov.in ಮೂಲಕವೇ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಆಗಸ್ಟ್ 21 ರಿಂದ ಸೆಪ್ಟೆಂಬರ್ 04 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ನಿಗದಿತ ದಿನಾಂಕದ ನಂತರ ಬರುವ ಹಾಗೂ ಇಲಾಖೆಯ ಕಚೇರಿಗೆ ನೇರವಾಗಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST