LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗವಕಾಶ ಸೃಜನೆಗೆ ಜಿಲ್ಲಾಧಿಕಾರಿ ಎಸ್.ರಮ್ಯ ಸೂಚನೆ

ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗವಕಾಶ ಸೃಜನೆಗೆ ಜಿಲ್ಲಾಧಿಕಾರಿ ಎಸ್.ರಮ್ಯ ಸೂಚನೆ

 

 ಚಿತ್ರದುರ್ಗ: ಐಟಿಐ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‍ಶಿಪ್ ಮತ್ತು ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ರಮ್ಯ ಸೂಚಿಸಿದರು.

  ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ‘ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ'ಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು ಕೆಲಸಗಾರರಿರುವ ಕೇವಲ 8 ನೋಂದಾಯಿತ ಕೈಗಾರಿಕೆಗಳಿವೆ. ಈ ಪೈಕಿ ಸಕ್ರಿಯವಾಗಿರುವ ಸಂಸ್ಥೆಗಳಲ್ಲಿ ಯುವಕರಿಗೆ ಹೆಚ್ಚಿನ ಅಪ್ರೆಂಟಿಶ್‍ಶಿಪ್ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಅಗತ್ಯವಿರುವ ಕಡೆಗಳಲ್ಲಿ ಹೊಸ ಟ್ರೇಡ್‍ಗಳನ್ನು (ತರಬೇತಿ ವಿಭಾಗಗಳು) ಪರಿಚಯಿಸಿ ಕೈಗಾರಿಕೆಗಳೊಂದಿಗೆ ಸಮನ್ವಯ ಸಾಧಿಸಬೇಕು. ಸ್ಥಳೀಯವಾಗಿ ಕೈಗಾರಿಕೆಗಳು ಕಡಿಮೆಯಿರುವುದರಿಂದ, ಬೆಂಗಳೂರು ಹಾಗೂ ತುಮಕೂರು ಭಾಗದ ಪ್ರಮುಖ ಕೈಗಾರಿಕೆಗಳನ್ನು ಸಂಪರ್ಕಿಸಿ ಅಪ್ರೆಂಟಿಸ್ ಡ್ರೈವ್ ಹಾಗೂ ಉದ್ಯೋಗ ಮೇಳಗಳನ್ನು ಆಯೋಜಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸ್ವಯಂ ಉದ್ಯೋಗ ಹಾಗೂ ಸಾಲ ಸೌಲಭ್ಯ:

ಪಿಎಂಇಜಿಪಿ ಸೇರಿದಂತೆ ವಿವಿಧ ಯೋಜನೆಗಳಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಛಿಸುವ ಯುವಕ-ಯುವತಿಯರಿಗೆ ಮತ್ತು ಸ್ವಸಹಾಯ ಸಂಘಗಳ ಸದಸ್ಯರಿಗೆ ಬ್ಯಾಂಕುಗಳಿಂದ ಸಾಲ ಸೌಲಭ್ಯ ದೊರೆಯುತ್ತಿರುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಬ್ಯಾಂಕ್ ಶಾಖೆಗಳ ಮಟ್ಟದಲ್ಲಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರವೇ ಪರಿಶೀಲಿಸಿ, ಅರ್ಹ ಫಲಾನುಭವಿಗಳಿಗೆ ಯಾವುದೇ ವಿಳಂಬವಿಲ್ಲದೆ ಸಾಲ ಮಂಜೂರು ಮಾಡಿ ವಿತರಿಸುವಂತೆ ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಉಪಸಮಿತಿ ಮತ್ತು ತಾಲೂಕು ಸಮಿತಿಗಳ ಪುನಾರಚನೆ:

ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ತಾಲೂಕು ಮಟ್ಟದ ಕೌಶಲ್ಯ ಸಮಿತಿಗಳ ಕಾರ್ಯಚಟುವಟಿಕೆಗಳನ್ನು ಸಕ್ರಿಯಗೊಳಿಸಲು ಉಪಸಮಿತಿಗಳನ್ನು ಹಾಗೂ ತಾಲೂಕು ಮಟ್ಟದ ಸಮಿತಿಗಳನ್ನು ಪುನಾರಚಿಸಿಬೇಕು. ಯುವಜನರಿಗೆ ಅಗತ್ಯ ಕೌಶಲ್ಯ ತರಬೇತಿ ನೀಡಿ ಸ್ವಾವಲಂಬಿಗಳನ್ನಾಗಿ ಮಾಡಲು ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಹಾಗೂ ಅಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು.

 

ಇದೇ ವೇಳೆ ಜಪಾನ್‍ನಲ್ಲಿ ನಡೆಯಲಿರುವ ವಿಶ್ವ ಕೌಶಲ್ಯ ಸ್ಪರ್ಧೆಗೆ ಜಿಲ್ಲೆಯಿಂದ 135 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಅಭ್ಯರ್ಥಿಗಳಿಗೆ ಸೂಕ್ತ ಸ್ಕ್ರೀನಿಂಗ್ ಮತ್ತು ತರಬೇತಿ ನೀಡಿ, ಮುಂದಿನ ಹಂತಗಳಿಗೆ ಸಜ್ಜುಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಣ್ಣಕ್ಕಿ ಮಾರುತಿ, ಜಿ.ಪಂ.ಯೋಜನಾ ನಿರ್ದೇಶಕಿ ಜಯಲಕ್ಷಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್,ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ, ಲೀಡ್ ಬ್ಯಾಂಕ್ ಜಿಲ್ಲಾ ವ್ಯಸ್ಥಾಪಕ ಎಂ.ಪಿ.ಪ್ರವೀಣ್, ಹಿಂದುಳಿದ ವರ್ಗಗಳ ಜಿಲ್ಲಾಧಿಕಾರಿ ಪುಷ್ಪಲತಾ ಭಾವಿಮಠ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
13-11-2026 ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿಪದೇ ಪದೇ ಮನೆಯಲ್ಲಿ ಹಣದ ಸಮಸ್ಯೆ ಎದುರಾಗುತ್ತಿದ್ದರೆ ಶುಕ್ರವಾರ ದಿನ ಹೊಸ್ತಲಿನ  ಮುಂದೆ ಸರಳ ಪ್ರಯೋಗ ಮಾಡಿ ..!-ಡಕ್ಕೆಯ ಬೊಮ್ಮಣ್ಣ ನವರ ವಚನ..!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿಉದ್ಯೋಗದಲ್ಲಿ  ಅಭಿವೃದ್ಧಿಯಾಗಬೇಕಾ ವ್ಯಾಪಾರದಲ್ಲಿ ಸಾಕಷ್ಟು ರೀತಿಯ ಪ್ರಯೋಜನ ಸಿಗಬೇಕೆಂದರೆ ಈ ತಂತ್ರವನ್ನು ಮಾಡಿ.!!!!!!!ಪಡಿತರ ಚೀಟಿದಾರರು ಇ-ಕೆವೈಸಿ ಪ್ರಕ್ರಿಯೆಗೆ ನಿಗದಿಪಡಿಸಿದ್ದ ಗಡುವು ನವೆಂಬರ್ 30 ಕ್ಕೆ ಕೊನೆಯ ದಿನಾಂಕ!ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಲ್ಲಿದೆ ಅಮೆಜಾನ್‌ನ ಸ್ಕಾಲರ್‌ಶಿಪ್ ವಿವರ.!ಕಾನೂನು ನೆರವಿನಿಂದ ಯಾರು ವಂಚಿತರಾಗಬಾರದು ನ್ಯಾಯಾಧೀಶರಾದ ಗಂಗಾಧರ ಚನ್ನಬಸಪ್ಪ ಹಡಪದ್.!ನ.20ರಂದು ಗ್ರಾಮ ಪಂಚಾಯಿತಿ ಕರವಸೂಲಿಗಾರ ಹುದ್ದೆಗೆ: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ..!ನೀರಾವರಿ ಈರುಳ್ಳಿ ಬೆಳೆಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ: ನೋಂದಣಿಗೆ ನವೆಂಬರ್ 30 ಕೊನೆಯ ದಿನ.!