LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಶೀಘ್ರ ಮೂರು ತಾಲ್ಲೂಕುಗಳು ಬರ ಪಟ್ಟಿಗೆ ಸೇರ್ಪಡೆ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಸ್ಪಷ್ಟನೆ

ಶೀಘ್ರ ಮೂರು ತಾಲ್ಲೂಕುಗಳು ಬರ ಪಟ್ಟಿಗೆ ಸೇರ್ಪಡೆ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಸ್ಪಷ್ಟನೆ

 

ಚಿತ್ರದುರ್ಗ: ಮುಂದಿನ ಹಂತದಲ್ಲಿ ಚಿತ್ರದುರ್ಗ,ಹೊಳಲ್ಕೆರೆ, ಮೊಳಕಾಲ್ಮೂರು ತಾಲ್ಲೂಕುಗಳು ಸಹ ಕೇಂದ್ರ ನಿಯಮಾವಳಿಗಳ ಪ್ರಕಾರ ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಲಿವೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಸ್ಪಷ್ಟಪಡಿಸಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ತಮ್ಮನ್ನು ಭೇಟಿಯಾದ ಜಿಲ್ಲೆಯ ರೈತ ಮುಖಂಡರೊAದಿಗೆ ಈ ಕುರಿತು ಚರ್ಚಿಸಿದರು.

ಬರ ಘೋಷಣೆ ವಿಚಾರದಲ್ಲಿ ಸಾರ್ವಜನಿಕರು ಹಾಗೂ ರೈತರಲ್ಲಿ ಇರುವ ಗೊಂದಲಗಳಿಗೆ ತೆರೆ ಎಳೆದ ಸಚಿವರು, ಬರ ಘೋಷಣೆ ಮಾಡುವುದು ರಾಜ್ಯ ಸರ್ಕಾರದ ಕೈಯಲ್ಲಿಲ್ಲ. ಬದಲಾಗಿ, ಕೇಂದ್ರ ಸರ್ಕಾರದ ‘ಬರ ನಿರ್ವಹಣೆ ಕೈಪಿಡಿ 2020’ ರ ಮಾರ್ಗದರ್ಶಿ ಸೂತ್ರಗಳನ್ನು ಆಧರಿಸಿ ರೂಪಿಸಿರುವ ಮಾನದಂಡಗಳ ಆಧಾರದ ಮೇಲೆ ಬರ ನಿರ್ಧಾರವಾಗುತ್ತದೆ ಎಂದರು.

ಬರಪೀಡಿತ ಎಂದು ಘೋಷಿಸಲು ಮೊದಲನೆಯದಾಗಿ ಶೇ 60ಕ್ಕಿಂತ ಹೆಚ್ಚಿನ ಮಳೆ ಕೊರತೆ ಇರಬೇಕು. ಸತತ ಮೂರು ವಾರಗಳ ಕಾಲ ಶುಷ್ಕ ವಾತಾವರಣ ಇರಬೇಕು. ಈ ಹಿಂದೆ ಪಟ್ಟಿ ಘೋಷಿಸುವಾಗ ಜೂನ್‌ನಿಂದ ಆಗಸ್ಟ್ 12ರವರೆಗಿನ ಅವಧಿಯಲ್ಲಿ ಸತತ ಮೂರು ವಾರಗಳ ಕಾಲ ಮಳೆಯಾಗದೆ ಶುಷ್ಕ ಅವಧಿ ಇದ್ದ ತಾಲ್ಲೂಕುಗಳನ್ನು ಮಾತ್ರ ಪರಿಗಣಿಸಲಾಗಿತ್ತು. ಬರ ಪಟ್ಟಿ ಘೋಷಣೆಯಲ್ಲಿ ಯಾವುದೇ ರಾಜಕೀಯ ಪಕ್ಷಪಾತವಾಗಲಿ ಅಥವಾ ಅಧಿಕಾರಿಗಳ ನಿರ್ಲಕ್ಷö್ಯವಾಗಲಿ ನಡೆದಿಲ್ಲ. ಯಾವುದೇ ರಾಜಯಕೀಯ ಲಾಭಕ್ಕಾಗಿ ತಾಲ್ಲೂಕುಗಳನ್ನು ಪಟ್ಟಿಗೆ ಸೇರ್ಪಡೆ ಮಾಡಲು ಆಗುವುದಿಲ್ಲ. ಇವೆಲ್ಲಾ ಉಹಾಪೋಹದ ಮಾತುಗಳು. ರೈತರು ಇವುಗಳಿಗೆ ಕಿವಿಗೊಡಬಾರದು ಎಂದು ಸಚಿವ ಟಿ.ರಘುಮೂರ್ತಿ ಹೇಳಿದರು.

ರಾಜ್ಯದ 25 ಜಿಲ್ಲೆಗಳ 175 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿಯಿದ್ದು, ಕೇಂದ್ರ ಸರ್ಕಾರದ ಮಾನದಂಡಗಳಡಿ 101 ತಾಲ್ಲೂಕುಗಳನ್ನು ಘೋಷಿಸಲಾಗಿದೆ. ಇದರಲ್ಲಿ 89 ತಾಲ್ಲೂಕುಗಳಲ್ಲಿ ತೀವ್ರ ಹಾಗೂ 12 ತಾಲ್ಲೂಕುಗಳಲ್ಲಿ ಸಾಧಾರಣ ಬರ ಪರಸ್ಥಿತಿ ತಲೆದೊರಿದೆ.

ಜಿಲ್ಲೆಯ ಬಿಟ್ಟುಹೋಗಿರುವ ಮೂರು ತಾಲ್ಲೂಕುಗಳಲ್ಲಿಯೂ ಸಹ ಶುಷ್ಕವಾತಾರಣ ದಾಖಲಾಗಿದೆ. ಈ ಬಗ್ಗೆ ‘ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವರದಿ ನೀಡಲಾಗಿದೆ. ನಿಯಮಾವಳಿಗಳ ಪ್ರಕಾರ ಶೀಘ್ರದಲ್ಲೇ ಬರ ಪೀಡತ ತಾಲ್ಲೂಕುಗಳು ಎಂದು ಘೋಷಿಸಲಾಗುವುದು ಎಂದು ಸಚಿವ ಟಿ.ರಘೂಮೂರ್ತಿ ಪುರುಚ್ಛರಿಸಿದರು.

ಈ ವೇಳೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ನಿಕಟಪೂರ್ವ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ, ರೈತ ಮುಖಂಡರು ಇದ್ದರು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಸೆ.6ರಂದು ಭದ್ರೆ ಆಗಮನಕ್ಕೆ ದುರ್ಗದಲ್ಲಿ ನೀರಾವರಿ ಹೋರಾಟ ಸಮಿತಿ ಸಂಭ್ರಮ ಸಿಹಿ ಹಂಚಿ ಸಡಗರ .!ಮಾಟ ಮಂತ್ರದ ಶಕ್ತಿ ಇರುವ ವಸ್ತುಗಳನ್ನು ದಾರಿಯಲ್ಲಿ ಯಾವುದೇ ಕಾರಣಕ್ಕೂ ತುಳಿಯಬೇಡಿ ಅಕಸ್ಮಾತ್ ತುಳಿದರೆ ಸಮಸ್ಯೆ ಕತ್ತಿಟ್ಟ ಬುತ್ತಿ!ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ.! ಇಲ್ಲಿದೆ ವಿವರದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 05-09-2026ಸೆ.6 ರಿಂದ ಭದ್ರಾ ಮೇಲ್ದಂಡೆ ಯೋಜನೆ ಐತಿಹಾಸಿಕ ಕ್ಷಣ: ಚಿತ್ರದುರ್ಗ ಶಾಖಾ ಕಾಲುವೆಗೆ ಹರಿಯಲಿದೆ ನೀರು.!-ಚೆನ್ನಬಸವಣ್ಣ ಅವರ ವಚನ.!‘ಯುವ ದಸರಾ’ ಸಂಭ್ರಮ ಚಾಲನೆಗೆ ನಟ ಪ್ರಭುದೇವ.!ಈ ಕಾರಣಕ್ಕೆ 'ಫೋಕ್ಸ್‌ವ್ಯಾಗನ್' ಸಂಸ್ಥೆಯಲ್ಲಿ 1 ಲಕ್ಷ ಉದ್ಯೋಗಗಳಿಗೆ ಕತ್ತರಿ.!ಕಾಳಿ ಮಂತ್ರದ ಪ್ರಯೋಗ! ಮಹಾಕಾಳಿ ಯಂತ್ರ ಮಂತ್ರ ಸಿದ್ಧಿಯಿಂದ ಆಕರ್ಷಣ ವಶೀಕರಣತಂತ್ರಜ್ಞಾನ ಹಾಗೂ ಕೌಶಲಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಿ: -ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್