ಚಿತ್ರದುರ್ಗ: ಸಿಖಂದರಾಬಾದ್ ದಕ್ಷಿಣ-ಕೇಂದ್ರ ರೈಲ್ವೆ ವಿಭಾಗ ವತಿಯಿಂದ ಹೊರಗುತ್ತಿಗೆ ಆಧಾರದ ಮೇಲೆ ಒಟ್ಟು 118 ಪಾಯಿಂಟ್ಸ್‍ಮನ್ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 18 ಅರ್ಜಿ ಸಲ್ಲಿಸಲು ಕೊನೆಯ ದಿನ.
ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ 54 ವರ್ಷದೊಳಗಿನ ಅರ್ಹ ಮಾಜಿ ಸೈನಿಕರು ಇದೇ ನವೆಂಬರ್ 18 ರೊಳಗಾಗಿ ನಿಗದಿತ ನಮೂನೆಯಲ್ಲಿ ಖುದ್ದಾಗಿ ಉಪ ನಿರ್ದೇಶಕರ ಕಚೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರಿಗೆ ಅರ್ಜಿಗಳನ್ನು ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ 08182-220925 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.