LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣೆಗೆ ಪ್ರೋತ್ಸಾಹ: ‘ಸ್ಪರ್ಶ' ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣೆಗೆ ಪ್ರೋತ್ಸಾಹ: ‘ಸ್ಪರ್ಶ' ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣೆಗೆ ಪ್ರೋತ್ಸಾಹ: ‘ಸ್ಪರ್ಶ' ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ: ಶಾಲಾ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣೆ ಹವ್ಯಾಸವನ್ನು ಉತ್ತೇಜಿಸುವ ಉದ್ದೇಶದಿಂದ ಅಂಚೆ ಇಲಾಖೆಯು ‘ದೀನ್ ದಯಾಳ್ ಸ್ಪರ್ಶ ಯೋಜನೆ'ಯಡಿ 6 ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅಂಚೆ ಚೀಟಿ ಸಂಗ್ರಹಣೆಯ ಸಾಮಥ್ರ್ಯ ಮತ್ತು ಸಂಶೋಧನಾ ಮನೋಭಾವವನ್ನು ಬೆಳೆಸುವ ಈ ಯೋಜನೆಯಡಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.6,000 ವಿದ್ಯಾರ್ಥಿವೇತನ ದೊರೆಯಲಿದೆ.

2025-26ರ ಶೈಕ್ಷಣಿಕ ಸಾಲಿನಲ್ಲಿ ಶೇ.60ರಷ್ಟು ಅಂಕ ಗಳಿಸಿರುವ ಹಾಗೂ ಅಂಚೆ ಚೀಟಿ ಸಂಗ್ರಹಣಾ ಠೇವಣಿ ಖಾತೆ ಅಥವಾ ಕ್ಲಬ್ ಸದಸ್ಯತ್ವ ಹೊಂದಿರುವ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಮೊದಲ ಹಂತದಲ್ಲಿ ‘ಫಿಲಾಟೆಲಿಕ್ ರಸಪ್ರಶ್ನೆ ಸ್ಪರ್ಧೆ'ಯ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10 ಕೊನೆಯ ದಿನವಾಗಿದೆ.

ಆಸಕ್ತರು ಹೆಚ್ಚಿನ ವಿವರಗಳಿಗೆ www.indiapost.gov.in  ಅಥವಾ https://app.indiapost.gov.in/circleportal/karnataka  ವೆಬ್‍ಸೈಟ್‍ಗೆ ಭೇಟಿ ನೀಡಬಹುದು.

     ಹೆಚ್ಚಿನ ಮಾಹಿತಿಗಾಗಿ ಅಂಚೆ ಅಧೀಕ್ಷಕರ ಕಚೇರಿ (ಚಿತ್ರದುರ್ಗ ವಿಭಾಗ) ಅಥವಾ ಕಚೇರಿ ಸಹಾಯಕರಾದ ಸಂತೋಷ್  ಮೊ 9164243697 ಅವರನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ವಿಭಾಗದ ಅಂಚೆ ಅಧೀಕ್ಷಕರಾದ ಕೆ.ಆರ್. ಉಷಾ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

( AI ಚಿತ್ರ ) 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮ ಶ ತ್ರು ಸಂಹಾರ ನಿಮ್ಮ ಕಣ್ಣು ಮುಂದೆ ನಿಮ್ಮ ಶತ್ರುಗಳು ಸದೆಬಡಿಯಿರಿ ನಿಮ್ಮ ತಂಟೆಗೆ ಬರುವುದಿಲ್ಲ.?ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ: ಕೆಪಿಎಸ್‌ಸಿ ಸದಸ್ಯೆ ಗೀತಾ ಇಡಿ ವಶಕ್ಕೆ.!ಗ್ರಾಮ ಆಡಳಿತಾಧಿಕಾರಿ ಹಾಗೂ ಗ್ರಾಮ ಸಹಾಯಕ 40 ಸಾವಿರ ಲಂಚ ಸ್ವೀಕಾರ ಲೋಕಾಯುಕ್ತ ಬಲೆಗೆ.!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 07-10-2026ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗವಕಾಶ ಸೃಜನೆಗೆ ಜಿಲ್ಲಾಧಿಕಾರಿ ಎಸ್.ರಮ್ಯ ಸೂಚನೆವಸತಿ ರಹಿತರಿಗೆ ಮನೆಗಳನ್ನು ಕಟ್ಟಿಸಿಕೊಡುವಂತೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಸತ್ಯಾಗ್ರಹ.!ವಾಹನಗಳ ದಟ್ಟಣೆ ಇರುವ ಕಡೆ ಗುಣ ಮಟ್ಟದ ಹಂಪ್ಸ್ಗಳನ್ನು ಅಳವಡಿಸಲು ಮನವಿ.!ಆಸಿಡ್ ಸಂತ್ರಸ್ತರಿಗೆ ಮಾನಸಿಕ, ಸಾಮಾಜಿಕ ಬೆಂಬಲ ಅಗತ್ಯ : ನ್ಯಾಯಾಧೀಶರಾದ ಜಿ.ಡಿ. ಮಹಾವರ್ಕರ್ವಚನ:  -ಸೊಡ್ಡಳ ಬಾಚರಸನಿಮ್ಮ ಮಕ್ಕಳು ತುಂಬಾ ಮಂಕು ಇದ್ರೆ ಓದಲ್ಲ ಮತ್ತು ಹೇಳಿದ ಮಾತು ಕೇಳೋದಿಲ್ಲ ಅಂದರೆ ಹೀಗೆ ಮಾಡಿರಿ..!?