ಬೆಂ.ಗ್ರಾ. ಜಿಲ್ಲೆ :ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ.
ಆಸಕ್ತ ಸ್ಥಳೀಯ ಅರ್ಹ ಮಹಿಳಾ ಅಭ್ಯರ್ಥಿಗಳು ಸೆಪ್ಟಂಬರ್ 10ರ ವರೆಗೂ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಖಾಲಿ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ ಇತ್ಯಾದಿ ಮಾಹಿತಿಗಾಗಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,. ಕೊಠಡಿ ಸಂ:206, 2ನೇ ಮಹಡಿ ಇಲ್ಲಿ ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.