ಚೆನ್ನೈ: ಪ್ರಯೋಗಶೀಲ ಸಿನಿಮಾ ನಿರ್ಮಾತೃ ಸಿಂಗೀತಂ ಶ್ರೀನಿವಾಸ ರಾವ್ ಅವರು ಶನಿವಾರ, ಅಕ್ಟೋಬರ್ 3ರಂದು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು.
ಚೆನ್ನೈ: ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ, ಚಿತ್ರಕಥೆಗಾರ ಹಾಗೂ ಪ್ರಯೋಗಶೀಲ ಸಿನಿಮಾ ನಿರ್ಮಾತೃ ಸಿಂಗೀತಂ ಶ್ರೀನಿವಾಸ ರಾವ್ ಅವರು ಶನಿವಾರ, ಅಕ್ಟೋಬರ್ 3ರಂದು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು.
ಸಿಂಗೀತಂ ಶ್ರೀನಿವಾಸ ರಾವ್ ಅವರು ಭಾರತೀಯ ಚಿತ್ರರಂಗದಲ್ಲಿ ವಿಭಿನ್ನ ಕಥೆ, ಹೊಸ ಪ್ರಯೋಗ ಮತ್ತು ವಿಶಿಷ್ಟ ನಿರೂಪಣಾ ಶೈಲಿಗೆ ಹೆಸರಾಗಿದ್ದರು. ಐದು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಇಂಗ್ಲಿಷ್ ಸೇರಿದಂತೆ ಹಲವು ಭಾಷೆಗಳಲ್ಲಿ ಸಿನಿಮಾಗಳನ್ನು ನಿರ್ದೇಶಿಸಿದ್ದರು.