LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ FIR.!

ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ FIR.!

ಚಿಕ್ಕಮಗಳೂರು: ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ. ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ? ಎಂಬ ಹೇಳಿಕೆ ನೀಡಿದ್ದ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ವಿರುದ್ಧ ಬಿಜೆಪಿ ವತಿಯಿಂದ ಚಿಕ್ಕಮಗಳೂರಿನಲ್ಲಿ ನಡೆದ ಯೂತ್ ಫಾರ್ ನೇಷನ್ ಕಾರ್ಯಕ್ರಮದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಸಿ.ಟಿ,ರವಿ ನಿಂದನಾತ್ಮಕ ಹೇಳಿಕೆ ನೀಡಿದ್ದರು. ಹಿನ್ನೆಲೆಯಲ್ಲಿ ಸಿ.ಟಿ.ರವಿ ವಿರುದ್ಧ ಪ್ರಕರಣ ದಾಖಲಾಗಿದೆ.

 ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ್ದ ಸಿ.ಟಿ.ರವಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಸಂಸತ್ ಭವನದ ಬಳಿ ನಡೆದ ಪ್ರತಿಭಟನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸುವ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದವನ್ನ ಉದ್ದೇಶಿಸಿ ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ? ಅವರ ಎದೆ ಸೀಳಿದರೆ ಮೂರು ಅಕ್ಷರವೂ ಇಲ್ಲ. ಅಂತಹವರು ನೀಟ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಬೇಕಂತೆ, ಮೋದಿ ಹಠವೋ ಅಂತೆ. ಅವರಿಗೂ ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದಕ್ಕೂ ಏನ್ಸಂಬಂಧ? ಎಂದು ಪ್ರಶ್ನಿಸಿದ್ದರು.

ಇಂತಹ ವಿರೋಧಿಗಳು, ತುಕ್ಡೆ ಗ್ಯಾಂಗ್ ಗಳು ಅಲ್ಲಿ ಬಂದು ಮಾತಾಡ್ತಾರೆ. ತುಕ್ಡೆ ಗ್ಯಾಂಗ್ ಅಂದ್ರೆ ಯಾರು ಅಂತಾ ಗೊತ್ತಲ್ಲಾ. ಭಾರತ್ ತೇರೇ ತುಕ್ಡೆ ಹೋಂಗೆ, ಇನ್ ಶಾ ಅಲ್ಲಾ ಘೋಷಣೆ ಕೂಗಿದಂತೆ ತುಕ್ಕೆ ಗ್ಯಾಂಗ್ ಗಳು ಹೋರಾಟದಲ್ಲಿ ಭಾಗವಹಿಸುತ್ತಾರೆ ಎಂದು ಹೇಳಿದ್ದರು.

 

ಸಿ.ಟಿ ರವಿ ಅವರ ಹೇಳಿಕೆಯಿಂದ ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಮುಸ್ಲಿಂ ಸಮುದಾಯ ಸಿ.ಟಿ.ರವಿ ವಿರುದ್ಧ ಅಸಮಾಧಾನ ಹೊರಹಾಕಿತ್ತು.

ಸಮುದಾಯವನ್ನ ನಿಂದಿಸಿ ಸಮಾಜದಲ್ಲಿ ದ್ವೇಷ ಮತ್ತು ಅಶಾಂತಿ ಎಬ್ಬಿಸಲು ಯತ್ನಿಸಲಾಗಿದೆ ಎಂದು ಜಾಮೀಯ ಮಸೀದಿ ಅಧ್ಯಕ್ಷ ಮುದಾಸೀರ್ ಪಾಷಾ ಸಿ.ಟಿ. ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದ್ವೇಷ ಭಾಷಣ ಮಾಡಿದ ಸಿ.ಟಿ. ರವಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ FIR.!ಶಿಕ್ಷಣ ಸಚಿವರ ರಾಜೀನಾಮೆ ಸೋನಮ್ ವಾಂಗ್ಚುಕ್ ಪ್ರತಿಕ್ರಿಯೆ ಹೀಗಿದೆ.!ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ.!ಸೋನಮ್ ವಾಂಗ್ಚುಕ್ ಅವರ ಬಗ್ಗೆ ಮಾತನಾಡಿದ ವಿಮರ್ಶಕರಿಗೆ ಇಲ್ಲಿದೆ ಉತ್ತರ ಶಾಪ ವಿಮೋಚನ ವಿಧಿ ಎಂಬುದು ಸನಾತನ ಧರ್ಮದಲ್ಲಿ ಹಿಂದಿನ ಜನ್ಮದ ನಕಾರಾತ್ಮಕ ಆಲೋಚನೆಗಳಿಂದ ಉಂಟಾಗುವ ಕಷ್ಟಗಳನ್ನು ದೂರ ಮಾಡಲು ಮಾಡುವ ದಿವ್ಯ ಪ್ರಕ್ರಿಯೆಯಾಗಿದೆ. ಈ ಜಿಲ್ಲೆಗಳಲ್ಲಿ ಇಂದು  ಭಾರೀ ಮಳೆ: ಶಾಲಾ ಕಾಲೇಜುಗಳಿಗೆ ರಜೆಶಿಕ್ಷಣ ಮಂತ್ರಿ ಧರ್ಮೆಂದ್ರ ಪ್ರಧಾನ್ ರಾಜಿನಾಮೆಗೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ರೈತ ಸಂಘದವರಿಂದ ಪ್ರತಿಭಟನೆಬಿಜೆಪಿ ಯಿಂದ ಕಾಂಗ್ರೆಸ್ ಗೂಂಡಾ ವರ್ತನೆ ವಿರುದ್ದ ಧಿಕ್ಕಾರ.!ಹಿರಿಯೂರು ಉಪ ಚುನಾವಣೆ: ಸಿ.ಶಿವುಯಾದವ್ ಗೆ ಕಾಂಗ್ರೆಸ್ ಟಿಕೆಟ್ ನೀಡಿ.!