ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರು-ಪೇರು.!
ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು ಎದೆ ಸೋಂಕಿನ ಸಮಸ್ಯೆಯಿಂದಾಗಿ ಶುಕ್ರವಾರ ರಾತ್ರಿ ದೆಹಲಿಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ (98) ಅವರು ಎದೆ ಸೋಂಕಿನ ಸಮಸ್ಯೆಯಿಂದಾಗಿ ದೆಹಲಿಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶುಕ್ರವಾರ ರಾತ್ರಿ ಆಸ್ಪತ್ರೆಗೆ ದಾಖಲಾದ ಅವರಿಗೆ ಶ್ವಾಸಕೋಶ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರ ತಂಡ ನಿರಂತರ ನಿಗಾ ವಹಿಸಿದೆ.
98 ವರ್ಷದ ಅಡ್ವಾಣಿ ಅವರನ್ನು ಶುಕ್ರವಾರ ರಾತ್ರಿ ಸುಮಾರು 7.30ರ ವೇಳೆಗೆ ಆಸ್ಪತ್ರೆಗೆ ಕರೆತರಲಾಗಿದೆ. ಬಳಿಕ ಅವರನ್ನು ಶ್ವಾಸಕೋಶ ವಿಭಾಗಕ್ಕೆ ದಾಖಲಿಸಲಾಗಿದ್ದು, ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ಈ ಕುರಿತು ಮಾಹಿತಿ ಹೊಂದಿರುವ ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಅಡ್ವಾಣಿ ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.