ದಾವಣಗೆರೆ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆಗಸ್ಟ್ 27 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 49 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.
ಆಸಕ್ತ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆಗಳೊಂದಿಗೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಈ ಕೆಳಕಂಡ ದೂರವಾಣಿ ಸಂಖ್ಯೆ 8970476050, 9591514154, 9686248369, 6363139123, 9886935603 ಗಳಿಗೆ ಸಂಪರ್ಕಿಸಬಹುದೆAದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.