ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದಲ್ಲಿ ನಡೆಯಲಿರುವ ಶ್ರೀ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಮುಂಜಾಗ್ರತಾ ಕ್ರಮವಾಗಿ ಗೌರಸಮುದ್ರ ಮತ್ತು ಸುತ್ತಮುತ್ತಲಿನ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಮ್ಯಾ ಎಸ್. ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಲ್ಲಿಸಿದ್ದ ಪ್ರಸ್ತಾಪನೆಯ ಮೇರೆಗೆ ಜಾತ್ರೆಯ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮತ್ತು ಶಾಂತಿ ಸುವ್ಯವಸ್ಥೆಯನ್ನು ಕಾಯ್ದುಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ.
ಅಬಕಾರಿ ಕಾಯ್ದೆ 1965ರ ಕಲಂ 21(1)ರ ಅಡಿ ಮದ್ಯ ಮಾರಾಟ ನಿಷೇಧಿಸಲಾಗಿದ್ದು, ಸೆ.14 ರ ಮಧ್ಯರಾತ್ರಿ 12 ಗಂಟೆಯಿAದ ಸೆ.15 ಮಧ್ಯರಾತ್ರಿ 12 ಗಂಟೆಯವರೆಗೆ ನಿಗದಿಪಡಿಸಿದ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ ಮಾಡುವುದು ಅಥವಾ ಸಾಗಾಣಿಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.