LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಬಹುರಾಷ್ಟ್ರೀಯ ಕಂಪನಿಗಳನ್ನು ಭಾರತದಿಂದ ತೊಲಗಿಸಿ: ಪ್ರತಿಭಟನೆ.!

ಬಹುರಾಷ್ಟ್ರೀಯ ಕಂಪನಿಗಳನ್ನು ಭಾರತದಿಂದ ತೊಲಗಿಸಿ: ಪ್ರತಿಭಟನೆ.!

 

ಚಿತ್ರದುರ್ಗ : ಬಹುರಾಷ್ಟ್ರೀಯ ಕಂಪನಿಗಳನ್ನು ಭಾರತದಿಂದ ತೊಲಗಿಸುವುದಕ್ಕಾಗಿ ದೇಶಾದ್ಯಂತ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಚಳುವಳಿಗೆ ಬೆಂಬಲಿಸಿ ವಿವಿಧ ಸಂಘಟನೆಗಳು ಗಾಂಧಿ ವೃತ್ತದಲ್ಲಿ ಒಂದು ಗಂಟೆಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ಪರಿಣಾಮ ಪ್ರವಾಸಿ ಮಂದಿರದ ಮುಂಭಾಗದಿಂದ ಗಾಂಧಿ ಸರ್ಕಲ್ವರೆಗೂ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಟ್ರಾಫಿಕ್ ಜಾಮ್ ಆಗಿತ್ತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂಯುಕ್ತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ವಿದೇಶಿ ಕಂಪನಿಗಳು, ಕಾರ್ಪೊರೇಟರ್ಗಳು, ಬಂಡವಾಳ ಶಾಹಿಗಳು ನಮ್ಮ ದೇಶದ ರೈತರು ಕಾರ್ಮಿಕರ ಮೇಲೆ ಸವಾರಿ ಮಾಡುತ್ತಿದ್ದಾರೆ. ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸಿಗದ ಕಾರಣ ಸಾಲದ ಸುಳಿಗೆ ಸಿಲುಕಿರುವ ರೈತ ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾನೆ. ನರೇಗಾ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಜಿರಾಮ್ಜಿ ಎಂದು ಬದಲಾವಣೆ ಮಾಡಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಬಡವರಿಗೆ ಕೆಲಸ ಸಿಗುತ್ತಿಲ್ಲ ಎಂದು ಕೇಂದ್ರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ನಾಲ್ಕು ಕಾರ್ಮಿಕ ಕಾಯಿದೆಗಳಿಗೆ ತಿದ್ದುಪಡಿ ತಂದಿರುವುದರಿಂದ ದಿನಕ್ಕೆ ಎಂಟು ಗಂಟೆಗಳ ಕಾಲ ದುಡಿಯುತ್ತಿರುವ ಕಾರ್ಮಿಕರು ಹನ್ನೆರಡು ಗಂಟೆಗಳ ಕಾಲ ಕೆಲಸ ಮಾಡಬೇಕಿದೆ. ಮಹಿಳೆಯರು ರಾತ್ರಿ ಪಾಳೆಯದಲ್ಲಿ ಕೆಲಸ ಮಾಡಬೇಕೆಂಬ ಷರತ್ತು ವಿಧಿಸಿದೆ. ಕೈಗಾರಿಕಾ ನ್ಯಾಯಲಯದ ಬದಲಿಗೆ ಕಾರ್ಮಿಕ ನ್ಯಾಯಾಲಯ

ಗುತ್ತಿಗೆ ನೌಕರಿಯನ್ನು ಬಿಟ್ಟರೆ ಇನ್ನು ಮುಂದೆ ಯಾರಿಗೂ ಖಾಯಂ ಕೆಲಸವಿಲ್ಲ. ಇವು ಕಾರ್ಮಿಕರಿಗೆ ಮರಣ ಶಾಸಕನವಾಗಿ ಪರಿಣಮಿಸಿದೆ. ರೈತರಿಗೆ ಅತ್ಯವಶ್ಯಕವಾಗಿರುವ ಬೀಜ, ರಸಗೊಬ್ಬರ, ಕೀಟನಾಶಕಗಳಿಗೆ ಸಿಂಪಡಿಸುವ ಔಷಧಿಗಳ ಮೇಲೂ ಕೇಂದ್ರ ಸರ್ಕಾರ ಲಗ್ಗೆಯಿಟ್ಟಿರುವುರಿಂದ ರೈತ ಹೈರಾಣಾಗಿದ್ದಾನೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು, ಕಾರ್ಮಿಕರ ಹಿತ ಕಾಯುವ ಕಾಯಿದೆಗಳನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಗಾಂಧಿಜಿ ಬ್ರಿಟೀಷರೆ ಭಾರತ ಬಿಟ್ಟು ತೊಲಗಿ ಕ್ವಿಟ್ ಇಂಡಿಯಾ ಚಳುವಳಿ ಆರಂಭಿಸಿದ ಭಾಗವಾಗಿ ಈಗ ಕಾರ್ಪೊರೇಟ್ ಕಂಪನಿಗಳನ್ನು ದೇಶದಿಂದ ಓಡಿಸುವ ಚಳುವಳಿ ಆರಂಭವಾಗಿದೆ. ಸಾವಿರಾರು ಬಹುರಾಷ್ಟ್ರೀಯ ಕಂಪನಿಗಳು ನಮ್ಮ ದೇಶಕ್ಕೆ ಕಾಲಿಟ್ಟಿವೆ. ಕೇಂದ್ರ ಸರ್ಕಾರ ಜನ ವಿರೋಧಿ ಹಾಗೂ ರೈತ ವಿರೋಧಿ ಕಾಯಿದೆಗಳನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.

ರೈತ ಮುಖಂಡ ಆರ್.ಬಿ.ನಿಲಿಂಗಪ್ಪ ಮಾತನಾಡಿ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಬೇಕಾಗಿರುವ ಸಾಮಗ್ರಿಗಳು ತುಕ್ಕು ಹಿಡಿಯುತ್ತಿವೆ. ಕೇಂದ್ರ ಸರ್ಕಾರ 5300

ಕೋಟಿ ರೂ.ಗಳನ್ನು ಘೋಷಿಸಿದೆ. ಇದುವರೆವಿಗೂ ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಕೆರೆಗಳಿಗೆ ನೀರು ತುಂಬಿಸಿ ಬರ ಪೀಡಿತ ಚಿತ್ರದುರ್ಗ ಜಿಲ್ಲೆಯ ರೈತರು ಕಾರ್ಮಿಕರು, ಬಡವರ ಬದುಕನ್ನು ಹಸನುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಮಾತನಾಡಿ ವಿದೇಶಿ ಕಂಪನಿಗಳನ್ನು ದೇಶದಿಂದ ಒದ್ದೋಡಿಸಲು ವಿವಿಧ ಸಂಘಟನೆಗಳು ಭಾರತಾದ್ಯಂತ ಚಳುವಳಿಗೆ ಇಳಿದಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಳು ರೈತ ಕಾರ್ಮಿಕ ವಿರೋಧಿ ನೀತಿ ಅನುಸರಿಬಾರದೆಂದರು.

ಸಂಯುಕ್ತ ಹೋರಾಟ ಕರ್ನಾಟಕ ಸಂಚಾಲಕ ಕುಮಾರ್ ಸಮತಳ ಮಾತನಾಡುತ್ತ ರೈತರು ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಬಿಡದಿ ಟೌನ್ಶಿಪ್ಗಾಗಿ ರೈತರ ಫಲವತ್ತಾದ ಭೂಮಿಗಳನ್ನು ಕಸಿದುಕೊಳ್ಳುವ ಹುನ್ನಾರ ನಡೆಸುತ್ತಿದೆ. ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಹಕ್ಕು ಕೊಡುತ್ತಿಲ್ಲ. ಮನೆಯಿಲ್ಲದವರಿಗೆ ಮನೆಗಳನ್ನು ಕೊಡಬೇಕೆನ್ನುವುದು ನಮ್ಮ ಬಹುದಿನಗಳ ಬೇಡಿಕೆ ಎಂದರು.

ರೈತ ಮುಖಂಡರುಗಳಾದ ಧನಂಜಯ ಹಂಪಯ್ಯನಮಾಳಿಗೆ, ಹೊರಕೇರಪ್ಪ, ಡಿ.ಎಸ್.ಮಲ್ಲಿಕಾರ್ಜುನ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಬಸ್ತಿಹಳ್ಳಿ ಸುರೇಶ್, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಸತ್ಯಪ್ಪ ಮಲ್ಲಾಪುರ, ಸಿಐಟಿಯು.ನ ಮಲಿಯಪ್ಪ, ತಿಪ್ಪೇಸ್ವಾಮಿ, ಅಖಂಡ ಕರ್ನಾಟಕ ರೈತ ಸಂಘದ ಶಾಂತಮ್ಮ, ಹನುಮಂತಪ್ಪ ಗೋನೂರು, ಕರ್ನಾಟಕ ಜನಶಕ್ತಿ ರಾಜ್ಯ ಸಮಿತಿ ಸದಸ್ಯ ಟಿ.ಶಫಿವುಲ್ಲಾ ಸೇರಿದಂತೆ ಸಂಯುಕ್ತ ಕಿಸಾನ್ ಮೋರ್ಚಾ, ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ, ಸಂಯುಕ್ತ ಹೋರಾಟ ಕರ್ನಾಟಕದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಸೆ.6ರಂದು ಭದ್ರೆ ಆಗಮನಕ್ಕೆ ದುರ್ಗದಲ್ಲಿ ನೀರಾವರಿ ಹೋರಾಟ ಸಮಿತಿ ಸಂಭ್ರಮ ಸಿಹಿ ಹಂಚಿ ಸಡಗರ .!ಮಾಟ ಮಂತ್ರದ ಶಕ್ತಿ ಇರುವ ವಸ್ತುಗಳನ್ನು ದಾರಿಯಲ್ಲಿ ಯಾವುದೇ ಕಾರಣಕ್ಕೂ ತುಳಿಯಬೇಡಿ ಅಕಸ್ಮಾತ್ ತುಳಿದರೆ ಸಮಸ್ಯೆ ಕತ್ತಿಟ್ಟ ಬುತ್ತಿ!ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ.! ಇಲ್ಲಿದೆ ವಿವರದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 05-09-2026ಸೆ.6 ರಿಂದ ಭದ್ರಾ ಮೇಲ್ದಂಡೆ ಯೋಜನೆ ಐತಿಹಾಸಿಕ ಕ್ಷಣ: ಚಿತ್ರದುರ್ಗ ಶಾಖಾ ಕಾಲುವೆಗೆ ಹರಿಯಲಿದೆ ನೀರು.!-ಚೆನ್ನಬಸವಣ್ಣ ಅವರ ವಚನ.!‘ಯುವ ದಸರಾ’ ಸಂಭ್ರಮ ಚಾಲನೆಗೆ ನಟ ಪ್ರಭುದೇವ.!ಈ ಕಾರಣಕ್ಕೆ 'ಫೋಕ್ಸ್‌ವ್ಯಾಗನ್' ಸಂಸ್ಥೆಯಲ್ಲಿ 1 ಲಕ್ಷ ಉದ್ಯೋಗಗಳಿಗೆ ಕತ್ತರಿ.!ಕಾಳಿ ಮಂತ್ರದ ಪ್ರಯೋಗ! ಮಹಾಕಾಳಿ ಯಂತ್ರ ಮಂತ್ರ ಸಿದ್ಧಿಯಿಂದ ಆಕರ್ಷಣ ವಶೀಕರಣತಂತ್ರಜ್ಞಾನ ಹಾಗೂ ಕೌಶಲಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಿ: -ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್