LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಗೃಹಲಕ್ಷ್ಮಿ ಫಲಾನುಭವಿಗಳು  ಆಧಾರ್ ಮತ್ತು ವೋಟರ್ ಐಡಿ ಲಿಂಕ್ ಇದ್ರೆ ಮಾತ್ರ ಹಣ.!

ಗೃಹಲಕ್ಷ್ಮಿ ಫಲಾನುಭವಿಗಳು  ಆಧಾರ್ ಮತ್ತು ವೋಟರ್ ಐಡಿ ಲಿಂಕ್ ಇದ್ರೆ ಮಾತ್ರ ಹಣ.!

 

ಬೆಂಗಳೂರು: ಆಧಾರ್ ಮತ್ತು ವೋಟರ್ ಐಡಿ ಲಿಂಕ್ ಆಗಿದ್ದರೆ ಮಾತ್ರ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುವ ಕುರಿತಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಗ್ಯಾರಂಟಿ ಯೋಜನೆಯ ಅಧ್ಯಕ್ಷರು, ಉಪಾಧ್ಯಕ್ಷರ ಜೊತೆಗೆ ಸಿಎಂ ಸಭೆ ನಡೆಸಿದ್ದಾರೆ. ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಮುಖ ಚಹರೆ, ಬೆರಳಚ್ಚು ಪಡೆಯುವ ಮೂಲಕ ದೃಢೀಕರಣ ಮಾಡಬೇಕು. ಜೊತೆಗೆ ಫಲಾನುಭವಿಗಳ ಆಧಾರ್ ಮತ್ತು ವೋಟರ್ ಐಡಿಯನ್ನು ಲಿಂಕ್ ಮಾಡಬೇಕು. ಆಧಾರ್ ಮತ್ತು ವೋಟರ್ ಐಡಿ ಎರಡೂ ಜೋಡಣೆಯಾದ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಹಣ ನೀಡಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಈಗಾಗಲೇ ನಡೆಯುತ್ತಿರುವ ಗೃಹಜ್ಯೋತಿ ಯೋಜನೆ ಫಲಾನುಭವಿಗಳ ಮರು ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಲು ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ವಿಸ್ತರಿಸುವುದಾಗಿ ಸಿಎಂ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್. ಎಂ. ರೇವಣ್ಣ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.

ಈ ವೇಳೆ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪಿ.ಟಿ. ಪರಮೇಶ್ವರ ನಾಯ್ಕ್, ಡಾ. ಪುಷ್ಪಾ ಅಮರನಾಥ್, ದಿನೇಶ್ ಗೂಳಿಗೌಡ ಹಾಗೂ ಪ್ರಜಾಸೇವಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Author
Bcsuddi - Basavaraj S
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಸೆ.6ರಂದು ಭದ್ರೆ ಆಗಮನಕ್ಕೆ ದುರ್ಗದಲ್ಲಿ ನೀರಾವರಿ ಹೋರಾಟ ಸಮಿತಿ ಸಂಭ್ರಮ ಸಿಹಿ ಹಂಚಿ ಸಡಗರ .!ಮಾಟ ಮಂತ್ರದ ಶಕ್ತಿ ಇರುವ ವಸ್ತುಗಳನ್ನು ದಾರಿಯಲ್ಲಿ ಯಾವುದೇ ಕಾರಣಕ್ಕೂ ತುಳಿಯಬೇಡಿ ಅಕಸ್ಮಾತ್ ತುಳಿದರೆ ಸಮಸ್ಯೆ ಕತ್ತಿಟ್ಟ ಬುತ್ತಿ!ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟ.! ಇಲ್ಲಿದೆ ವಿವರದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 05-09-2026ಸೆ.6 ರಿಂದ ಭದ್ರಾ ಮೇಲ್ದಂಡೆ ಯೋಜನೆ ಐತಿಹಾಸಿಕ ಕ್ಷಣ: ಚಿತ್ರದುರ್ಗ ಶಾಖಾ ಕಾಲುವೆಗೆ ಹರಿಯಲಿದೆ ನೀರು.!-ಚೆನ್ನಬಸವಣ್ಣ ಅವರ ವಚನ.!‘ಯುವ ದಸರಾ’ ಸಂಭ್ರಮ ಚಾಲನೆಗೆ ನಟ ಪ್ರಭುದೇವ.!ಈ ಕಾರಣಕ್ಕೆ 'ಫೋಕ್ಸ್‌ವ್ಯಾಗನ್' ಸಂಸ್ಥೆಯಲ್ಲಿ 1 ಲಕ್ಷ ಉದ್ಯೋಗಗಳಿಗೆ ಕತ್ತರಿ.!ಕಾಳಿ ಮಂತ್ರದ ಪ್ರಯೋಗ! ಮಹಾಕಾಳಿ ಯಂತ್ರ ಮಂತ್ರ ಸಿದ್ಧಿಯಿಂದ ಆಕರ್ಷಣ ವಶೀಕರಣತಂತ್ರಜ್ಞಾನ ಹಾಗೂ ಕೌಶಲಾಧಾರಿತ ಶಿಕ್ಷಣಕ್ಕೆ ಆದ್ಯತೆ ನೀಡಿ: -ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್