ಬೆಂಗಳೂರು: ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ಸಂಬಂಧ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತನ್ನ ವೆಬ್ ಸೈಟ್ ನಲ್ಲಿ ಲಿಂಕ್ ಬಿಟ್ಟಿದೆ.
ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ಆಗಸ್ಟ್ 8 ರಂದು ಹಾಗೂ ಉಳಿಕೆ ಮೂಲ ವೃಂದದ ಅಭ್ಯರ್ಥಿಗಳಿಗೆ ಆಗಸ್ಟ್ 9ರಂದು ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಕೋರಲಾಗಿದೆ.
https://cetonline.karnataka.gov.in/KEA_EXAM_PORTAL/Forms/Candidates/Login