ಫುಟ್‌ಪಾತ್ ಒತ್ತುವರಿ ತೆರವು ಅಭಿಯಾನಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ
ಬೆಂಗಳೂರು: ನಗರದಲ್ಲಿ GBA ನಡೆಸುತ್ತಿರುವ ಫುಟ್‌ಪಾತ್ ಒತ್ತುವರಿ ತೆರವು ಅಭಿಯಾನಕ್ಕೆ ತಡೆಯಾಜ್ಞೆ ನೀಡಲು ಕರ್ನಾಟಕ ಹೈಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ.
ನಗರ ತಜ್ಞ ಆರ್. ರಾಜಗೋಪಾಲನ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ವಿಚಾರಣೆ ನಡೆಸಿದ ಕೋರ್ಟ್, ರಾಜಧಾನಿಯ ರಸ್ತೆಗಳಲ್ಲಿ ಪಾದಚಾರಿಗಳು ಯಾವುದೇ ಅಡೆತಡೆಗಳಿಲ್ಲದೆ ಸುರಕ್ಷಿತವಾಗಿ ಸಂಚರಿಸಲು ಸೂಕ್ತ ಸ್ಥಳಾವಕಾಶ ಕಲ್ಪಿಸುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟಿದೆ. ಈ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.